newsfirstkannada.com

ಚಿಕ್ಕಮಗಳೂರಲ್ಲಿ ಮತ್ತೆ ಲವ್ ಜಿಹಾದ್?; ರೂಮ್​​ನಲ್ಲಿ ಕೂಡಿಹಾಕಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪ

Share :

Published February 9, 2024 at 1:32pm

Update February 9, 2024 at 3:33pm

    ಆಲ್ದೂರು ಪಟ್ಟಣದಲ್ಲಿ ಲವ್ ಜಿಹಾದ್ ಆರೋಪ ಪ್ರಕರಣ

    VHP ಜಿಲ್ಲಾ ಸಂಚಾಲಕ ಸೇರಿ ಆರು ಮಂದಿ ವಿರುದ್ಧ FIR

    ಆರೋಪಿಗಳ ಬಂಧಿಸಿ ಪೊಲೀಸರಿಂದ ತೀವ್ರ ವಿಚಾರಣೆ

ಚಿಕ್ಕಮಗಳೂರು ಜಿಲ್ಲೆಯ ಅಲ್ದೂರು ಪಟ್ಟಣದಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನಿಂದ ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂಪರ ಕಾರ್ಯಕರ್ತರು ರೂಮ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅನ್ಯ ಕೋಮಿನ ಯುವಕ ಹಾಗೂ ವಿಹೆಚ್​ಪಿ ಕಾರ್ಯಕರ್ತನ ಮೇಲೆ ಪೊಲೀಸರು ಎಫ್​ಐಆರ್​ ದಾಖಲಿಸಿ ಬಂಧಿಸಿದ್ದಾರೆ.

ಪೋಕ್ಸೋ ಕೇಸ್

ಯುವಕನಿಗೆ ರೂಂನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ ಆರೋಪದ ಮೇಲೆ ವಿಹೆಚ್​ಪಿ ಜಿಲ್ಲಾ ಸಂಚಾಲಕ ಸೇರಿ ಒಟ್ಟು 6 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇನ್ನು ಅನ್ಯಕೋಮಿನ ಯುವಕನ ಮೇಲೆ ಪೋಕ್ಸೋ ಅಡಿಯಲ್ಲಿ ಅಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಎಲ್ಲರನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ. ಪಟ್ಟಣದಲ್ಲಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕ್ಕಮಗಳೂರಲ್ಲಿ ಮತ್ತೆ ಲವ್ ಜಿಹಾದ್?; ರೂಮ್​​ನಲ್ಲಿ ಕೂಡಿಹಾಕಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪ

https://newsfirstlive.com/wp-content/uploads/2024/02/CKM_POLICE-3.jpg

Load More