Advertisment

ಚಿಕ್ಕೋಡಿಯಲ್ಲಿ ಬಿಜೆಪಿಗೆ ಬಿಗ್ ಶಾಕ್​.. ಮುನ್ನಡೆ ಕಾಯ್ದುಕೊಂಡ ಪ್ರಿಯಾಂಕಾ ಜಾರಕಿಹೊಳಿ

author-image
Bheemappa
Updated On
ಚಿಕ್ಕೋಡಿಯಲ್ಲಿ ಬಿಜೆಪಿಗೆ ಬಿಗ್ ಶಾಕ್​.. ಮುನ್ನಡೆ ಕಾಯ್ದುಕೊಂಡ ಪ್ರಿಯಾಂಕಾ ಜಾರಕಿಹೊಳಿ
Advertisment
  • ಭಾರೀ ಮುನ್ನಡೆ ಕಾಯ್ದುಕೊಂಡಿರುವ ಪ್ರಿಯಾಂಕಾ ಜಾರಕಿಹೊಳಿ
  • ಸದ್ಯಕ್ಕೆ ಬಿಜೆಪಿ ಅಭ್ಯರ್ಥಿ ಮತ ಎಣಿಕೆಯಲ್ಲಿ ಹಿನ್ನಡೆಯಲ್ಲಿ ಇದ್ದಾರೆ
  • ಕುಡಚಿ ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿ ಪ್ರಿಯಾಂಕಾಗೆ ಮುನ್ನಡೆ

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ.

Advertisment

ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

ಇದನ್ನೂ ಓದಿ:ಮಂಡ್ಯದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಮುನ್ನಡೆ; ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬಿಗ್ ಶಾಕ್‌!

ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment