/newsfirstlive-kannada/media/post_attachments/wp-content/uploads/2025/05/operation-sindoor12.jpg)
ಏಪ್ರಿಲ್ 22ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಈ ಬೆನ್ನಲ್ಲೇ ಭಯೋತ್ಪಾದಕರನ್ನು ಮಟ್ಟಹಾಕಲು ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೈಗೊಂಡ ಬೆನ್ನಲ್ಲೇ ಪಾಕಿಸ್ತಾನದ ಮೇಲೆ ಭಾರತ ಸೇನೆ ದಾಳಿ ನಡೆಸಿದೆ.
ಇದನ್ನೂ ಓದಿ: ವಾಯುಪಡೆಯಿಂದ ಮತ್ತೊಂದು ಅಟ್ಯಾಕ್.. ಪಾಕ್ಗೆ ಚೀನಾ ನೀಡಿದ್ದ ಯುದ್ಧ ವಿಮಾನ JF-17 ಉಡೀಸ್..! VIDEO
ಆದ್ರೆ, ಭಾರತ ಪಾಕಿಸ್ತಾನದ ಮೇಲೆ ಏರ್ ಸ್ಟ್ರೈಕ್ ಮಾಡಿದಕ್ಕೆ ಚೀನಾ ಪ್ರತಿಕ್ರಿಯೆ ನೀಡಿದೆ. ಈ ಹಿಂದೆ ಚೀನಾ ಮತ್ತು ಪಾಕಿಸ್ತಾನಿ ದೇಶಗಳು ಪರಸ್ಪರ ನಿಕಟ ಸಂಬಂಧವನ್ನು ಇಟ್ಟುಕೊಂಡಿದೆ. ಪಹಲ್ಗಾಮ್ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಬಿಗಡಾಯಿಸಿರುವ ನಡುವೆಯೇ ನೆರೆಯ ರಾಷ್ಟ್ರ ಚೀನಾ ಮತ್ತೆ ಪಾಕಿಸ್ತಾನಕ್ಕೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿತ್ತು. ದಕ್ಷಿಣ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗಾಗಿ ನಾವು ಸದಾ ಪಾಕಿಸ್ತಾನ ಬೆಂಬಲಿಸುತ್ತೇವೆ ಎಂದು ಅದು ಹೇಳಿತ್ತು.
ಇದೀಗ ಚೀನಾ ಎರಡು ಕಡೆಯವರು ಸಂಯಮದಿಂದ ನಿರ್ಬಂಧ ವಿಧಿಸಿಕೊಳ್ಳಬೇಕು ಎಂದ ಹೇಳಿದೆ. ಅಲ್ಲದೇ ನೆರೆ ರಾಷ್ಟ್ರ ಚೀನಾ, ಭಾರತ ಮತ್ತು ಪಾಕಿಸ್ತಾನ ದೇಶಗಳು ಶಾಂತಿ ಮತ್ತು ಸ್ಥಿರತೆಗಾಗಿ ಸಂಯಮದಿಂದ ವರ್ತಿಸಬೇಕು ಎಂದು ಕರೆ ಕೊಟ್ಟಿದೆ. ನಾವು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ಭವವಾಗಿರುವ ಗಡಿ ಉದ್ವಿಗ್ನತೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಈ ಬೆಳವಣಿಗೆಗಳು ಆಘಾತಕಾರಿ ಎಂದು ನಾವು ನಂಬುತ್ತೇವೆ. ಹೀಗಾಗಿ ಉಭಯ ದೇಶಗಳು ಸಂಯಮದಿಂದ ವರ್ತಿಸುವ ಮೂಲಕ, ಪರಿಸ್ಥಿತಿಯನ್ನು ತಿಳಿಗೊಳಿಸಲು ಮುಂದಾಗಬೇಕು ಎಂದು ಝೆಂಗ್ ಶಾಂಗ್ ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ