/newsfirstlive-kannada/media/post_attachments/wp-content/uploads/2025/06/Chinnaswamy-Stadium-stampede-2.jpg)
RCB ವಿಜಯೋತ್ಸವದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೂಕುನುಗ್ಗಲಿನಲ್ಲಿ 18ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 16 ಮಂದಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ 3 ಅಭಿಮಾನಿಗಳು ಸಾವನ್ನಪ್ಪಿದ್ರೆ, ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ವೈದೇಹಿ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
16 ಮಂದಿಗೆ ICU ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ 8 ಜನರ ಪರಿಸ್ಥಿತಿ ಗಂಭೀರವಾಗಿದೆ. 8 ಮಂದಿ ಔಟ್ ಆಫ್ ಡೇಂಜರ್ ಎನ್ನಲಾಗಿದೆ. ಅಸ್ವಸ್ಥರಾದವರ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಸಂಬಂಧಿಕರನ್ನು ಕಳೆದುಕೊಂಡ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ ಏರಿಕೆ
ನೂಕುನುಗ್ಗಲಿನ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಇದೀಗ ಸ್ಟೇಡಿಯಂ ಒಳಗೆ ಯಾರನ್ನು ಬಿಡುತ್ತಿಲ್ಲ. ಸ್ಟೇಡಿಯಂ ಒಳಗೆಯೂ ಜನ ಕಿಕ್ಕಿರಿದು ಸೇರಿದ್ದು, ಎಲ್ಲಾ ಗ್ಯಾಲರಿಯಲ್ಲೂ ಜನ ತುಂಬಿದ್ದಾರೆ.
ಗೇಟ್ ಬಳಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದ್ದು, ಸ್ಟೇಡಿಯಂ ಹೊರಗೆ ಸಹ ಯಾರನ್ನೂ ಬಿಡುತ್ತಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಾತಾವರಣ ಹತೋಟಿಗೆ ತರಲು ಹರಸಾಹಸ ಪಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ