ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಇನ್ನೋವಾ ಕಾರಿನಲ್ಲಿದ್ದ 5 ಮಂದಿ ದಾರುಣ ಅಂತ್ಯ, ಓರ್ವನ ಸ್ಥಿತಿ ಚಿಂತಾಜನಕ

author-image
admin
Updated On
ಚಿತ್ರದುರ್ಗದಲ್ಲಿ ಭೀಕರ ಅಪಘಾತ.. ಇನ್ನೋವಾ ಕಾರಿನಲ್ಲಿದ್ದ 5 ಮಂದಿ ದಾರುಣ ಅಂತ್ಯ, ಓರ್ವನ ಸ್ಥಿತಿ ಚಿಂತಾಜನಕ
Advertisment
  • ಚಿತ್ರದುರ್ಗದ ಗುಡ್ಡದರಂಗವ್ವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ
  • ತಮಿಳುನಾಡು ಮೂಲದ ಲಾರಿಗೆ ಡಿಕ್ಕಿಯಾದ ಇನ್ನೋವಾ ಕಾರು
  • ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುವಿನ ಸ್ಥಿತಿ ಚಿಂತಾಜನಕ

ಚಿತ್ರದುರ್ಗದ ಗುಡ್ಡದರಂಗವ್ವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಅನ್ನೋ ಮಾಹಿತಿ ಲಭ್ಯವಾಗಿದೆ.

ಇನ್ನೋವಾ ಕಾರಿನಲ್ಲಿದ್ದವರು ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಮೃತರನ್ನು ಶಾಂತಮೂರ್ತಿ, ಚಿದಂಬರ ಚಾರ್, ಮಲ್ಲಿಕಾರ್ಜುನ್, ರುದ್ರಸ್ವಾಮಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಫುಲ್ ರಾಂಗ್ ಆದ ನಟಿ ರಾಗಿಣಿ ದ್ವಿವೇದಿ.. ಅಭಿಮಾನಿ ಕಪಾಳಕ್ಕೆ ಬಾರಿಸಿ ಕೋಪಾತಾಪ; ವಿಡಿಯೋ ಇಲ್ಲಿದೆ! 

ಇನ್ನೋವಾ ಚಾಲಕನ ಅತಿವೇಗ & ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಕೂಡ‌ ಚಿಂತಾಜನಕವಾಗಿದ್ದು, ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿತ್ರದುರ್ಗ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಭೀಕರ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ರಂಜಿತ್ ಕುಮಾರ್ ಬಂಡಾರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment