ಚಿತ್ರದುರ್ಗದ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ ಹೈಕಮಾಂಡ್
ಹಾಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಬಿಜೆಪಿಯಿಂದ ಶಾಕ್
ಹಾಗದ್ರೆ ಈ ಸಲದ ಟಿಕೆಟ್ ಅನ್ನು ಬಿಜೆಪಿ ಯಾವ ಅಭ್ಯರ್ಥಿಗೆ ನೀಡಿದೆ
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ರೇಸ್ನಲ್ಲಿ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರ ಹೆಸರು ಮುಂಚೂಣಿಯಲ್ಲಿತ್ತು. ಅದರಂತೆ ಬಿಜೆಪಿ ಹೈಕಮಾಂಡ್ ಗೋವಿಂದ ಕಾರಜೋಳರಿಗೆ ಟಿಕೆಟ್ ನೀಡಿ ಅಧಿಕೃತ ಘೋಷಣೆ ಮಾಡಿದೆ.
ವಿಜಯಪುರ ಜಿಲ್ಲೆಯ ಮೂಲದವರಾದ ಮಾಜಿ ಡಿಸಿಎಂ ಗೋವಿಂದ ಕಾರಜೋಳರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಇದರಿಂದ ನನಗೆ ಟಿಕೆಟ್ ಸಿಗುತ್ತದೆ ಎಂದು ಭರವಸೆಯಲ್ಲಿದ್ದ ಹಾಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಭಾರೀ ನಿರಾಸೆಯಾದಂತೆ ಅಗಿದೆ. ಅಲ್ಲದೇ ಬೇರೆ ಜಿಲ್ಲೆಯವರಿಗೆ ಚಿತ್ರದುರ್ಗದ ಟಿಕೆಟ್ ಕೊಡಬಾರದು ಎಂದು ವಿರೋಧ ಕೇಳಿ ಬಂದಿತ್ತು. ಆದರೂ ಬಿಜೆಪಿ ಹೈಕಮಾಂಡ್ ಕಾರಜೋಳಗೆ ಟಿಕೆಟ್ ಘೋಷಣೆ ಮಾಡಿದೆ.
ಈ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಸ್ಪರ್ಧಿಸುವ ಎಲ್ಲ 25 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಉಳಿದ 3 ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ