newsfirstkannada.com

BREAKING: ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ; ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಶಾಕ್!

Share :

Published March 27, 2024 at 7:22pm

Update March 27, 2024 at 7:33pm

  ಚಿತ್ರದುರ್ಗದ ಟಿಕೆಟ್ ಘೋಷಣೆ ಮಾಡಿರುವ ಬಿಜೆಪಿ ಹೈಕಮಾಂಡ್

  ಹಾಲಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಬಿಜೆಪಿಯಿಂದ ಶಾಕ್

  ಹಾಗದ್ರೆ ಈ ಸಲದ ಟಿಕೆಟ್​ ಅನ್ನು ಬಿಜೆಪಿ ಯಾವ ಅಭ್ಯರ್ಥಿಗೆ ನೀಡಿದೆ

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರ ಹೆಸರು ಮುಂಚೂಣಿಯಲ್ಲಿತ್ತು. ಅದರಂತೆ ಬಿಜೆಪಿ ಹೈಕಮಾಂಡ್​ ಗೋವಿಂದ ಕಾರಜೋಳರಿಗೆ ಟಿಕೆಟ್ ನೀಡಿ ಅಧಿಕೃತ ಘೋಷಣೆ ಮಾಡಿದೆ.

ವಿಜಯಪುರ ಜಿಲ್ಲೆಯ ಮೂಲದವರಾದ ಮಾಜಿ ಡಿಸಿಎಂ ಗೋವಿಂದ ಕಾರಜೋಳರಿಗೆ ಬಿಜೆಪಿ ಹೈಕಮಾಂಡ್​ ಟಿಕೆಟ್​ ನೀಡಿದೆ. ಇದರಿಂದ ನನಗೆ ಟಿಕೆಟ್​ ಸಿಗುತ್ತದೆ ಎಂದು ಭರವಸೆಯಲ್ಲಿದ್ದ ಹಾಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಭಾರೀ ನಿರಾಸೆಯಾದಂತೆ ಅಗಿದೆ. ಅಲ್ಲದೇ ಬೇರೆ ಜಿಲ್ಲೆಯವರಿಗೆ ಚಿತ್ರದುರ್ಗದ ಟಿಕೆಟ್ ಕೊಡಬಾರದು ಎಂದು ವಿರೋಧ ಕೇಳಿ ಬಂದಿತ್ತು. ಆದರೂ ಬಿಜೆಪಿ ಹೈಕಮಾಂಡ್ ಕಾರಜೋಳಗೆ ಟಿಕೆಟ್ ಘೋಷಣೆ ಮಾಡಿದೆ.

ಈ ಮೂಲಕ ಬಿಜೆಪಿ ಹೈಕಮಾಂಡ್​ ರಾಜ್ಯದಲ್ಲಿ ಸ್ಪರ್ಧಿಸುವ ಎಲ್ಲ 25 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಉಳಿದ 3 ಸ್ಥಾನಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್​ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಚಿತ್ರದುರ್ಗ ಬಿಜೆಪಿ ಟಿಕೆಟ್ ಘೋಷಣೆ; ಕೇಂದ್ರ ಸಚಿವ ಎ ನಾರಾಯಣಸ್ವಾಮಿಗೆ ಶಾಕ್!

https://newsfirstlive.com/wp-content/uploads/2024/03/GOVINDA_KARJOLA.jpg

Load More