/newsfirstlive-kannada/media/post_attachments/wp-content/uploads/2024/11/JOBS_POURAKARMIKA.jpg)
ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನ ಮಾಡಿದೆ. ಕರ್ನಾಟಕ ಪುರಸಭೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು) ಪೌರಕಾರ್ಮಿಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿಯಲ್ಲಿ ಖಾಲಿ ಉಳಿದಿರುವ ಪೌರ ಕಾರ್ಮಿಕ ಹುದ್ದೆಗಳಿಗೆ ನೇರ ಪಾವತಿ ಅಡಿ ಭರ್ತಿ ಮಾಡಲಾಗುತ್ತಿದೆ. ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಮಾತ್ರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಉಲ್ಲೇಖ(4)ರ ಆದೇಶದಂತೆ ನೌಕರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಾಂಕ 07/08/2017ಕ್ಕಿಂತ ಮೊದಲು ನೇಮಕಾತಿ ಹೊಂದಿರುವವರು. ಪ್ರಸ್ತುತ ನೇರಪಾವತಿ ಅಡಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.
- ಪೌರಕಾರ್ಮಿಕರ ವೇತನ ಶ್ರೇಣಿ- 27,000 ದಿಂದ 47,675 ರೂಪಾಯಿಗಳು
- ವಿದ್ಯಾರ್ಹತೆ ಅವಶ್ಯಕತೆ ಇಲ್ಲ, ಆದರೆ ಕನ್ನಡ ಮಾತನಾಡಲು ಬರಬೇಕು
- ಮೀಸಲಾತಿ ಬೇಕು ಎನ್ನುವವರು ಪ್ರಮಾಣ ಪತ್ರ ಹೊಂದಿರಲೇಬೇಕು
- ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಇಲ್ಲಿ ನೇಮಕ ಮಾಡಲಾಗುತ್ತಿದೆ
ಅರ್ಜಿ ಸಲ್ಲಿಸಬೇಕಾದ ವಿಳಾಸ-
ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿ ಇವರಿಂದ ಅರ್ಜಿ ನಮೂನೆ ಪಡೆದು, ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ಬಳಿಕ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ ಇಲ್ಲಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ
05 ಡಿಸೆಂಬರ್ 2024
ಅರ್ಜಿ ಜೊತೆ ಈ ದಾಖಲಾತಿ ಲಗತ್ತಿಸಬೇಕು
- 3 ಫೋಟೋಗಳು
- ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ
- ಕೆಲಸ ಮಾಡುತ್ತಿರುವ ಬಗ್ಗೆ ಹಾಜರಾತಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮಾಜಿ ಸೈನಿಕ, ಗ್ರಾಮೀಣ, ಅಂಗವಿಕಲ ಮೀಸಲಾತಿ ಬೇಕಾದಲ್ಲಿ ಪ್ರಮಾಣ ಪತ್ರ ಇರಬೇಕು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ