/newsfirstlive-kannada/media/post_attachments/wp-content/uploads/2024/06/darshan12.jpg)
ಚಿತ್ರದುರ್ಗ: ಬೆಂಗಳೂರಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಸಹಚರರು ಅರೆಸ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಅಮಾನುಷ ಹತ್ಯೆಯನ್ನು ಖಂಡಿಸಿ ಇಂದು ಚಿತ್ರದುರ್ಗದ ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸಮುದಾಯದ ಮುಖಂಡರು ಸೇರಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ನನ್ನ ಮಗನ ಸಾಯಿಸಿದ ರೀತಿಯಲ್ಲೇ ದರ್ಶನ್ನನ್ನೂ ಸಾಯಿಸಿಬಿಡಿ -ಗಳಗಳನೇ ಕಣ್ಣೀರಿಟ್ಟ ತಾಯಿ
ರೇಣುಕಾಸ್ವಾಮಿ ಕೊಲೆ ಕೇಸ್ ಅನ್ನು ಸಿಬಿಐಗೆ ವಹಿಸಬೇಕು ಅಂತ ನಟ ದರ್ಶನ್ ಹಾಗೂ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಗರದ ನೀಲಕಂಠೇಶ್ವರ ದೇಗುಲದಿಂದ ಆರಂಭಗೊಂಡ ಪ್ರತಿಭಟನೆ ಬಿಡಿ ರಸ್ತೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ವೇಳೆ ನಗರದ ಮುಖ್ಯ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, 2 ನಿಮಿಷ ಮೌನಾಚರಣೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಕಾರರು ಸೇರಿ ನಟ ದರ್ಶನ್ ಹಾಗೂ ನಟಿ ಪವಿತ್ರ ಗೌಡ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಈ ಪ್ರತಿಭಟನೆ ವೇಳೆ ನಟ ದರ್ಶನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಇನ್ನು, ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದೆ. ಪ್ರಕರಣ ತಿರುವು ಪಡೆದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ವೀರಶೈವ ಮಹಾಸಭಾ ಮುಖಂಡರು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆ ನಡೆಸಿದ 24ನೇ ಆರ್ಥಿಕ ಅಪರಾಧಗಳ ಕೋರ್ಟ್ನ ಜಡ್ಜ್ ವಿಶ್ವನಾಥ್ ಸಿ. ಗೌಡರ್ ಅವರು, ನಟಿ ಪವಿತ್ರಾ ಗೌಡ, ನಟ ದರ್ಶನ್ & ಟೀಂ ಅನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ