ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಕುಸಿದು ಬಿದ್ದು ಸಾವು

author-image
AS Harshith
Updated On
ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಕುಸಿದು ಬಿದ್ದು ಸಾವು
Advertisment
  • ಕರ್ತವ್ಯದಲ್ಲಿದ್ದಾಗ 55 ವರ್ಷದ ಮಹಿಳೆ ಸಾವು
  • APROಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಕುಸಿದು ಬಿದ್ದು ಸಾವು
  • ಶಿಕ್ಷಕಿಯಾಗಿದ್ದ ಮಹಿಳೆ ಲೋಕಸಭಾ ಚುನಾವಣೆಯ ಕರ್ತವ್ಯದಲ್ಲಿದ್ದರು

ಚಿತ್ರದುರ್ಗ: ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ.

ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದರು. ಈ ವೇಳೆ APRO ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮತದಾನ ಮಾಡಿ ಮತಗಟ್ಟೆಯಿಂದ ಹೊರ ಬರುತ್ತಿದ್ದಂತೆ ವೃದ್ಧೆ ಸಾವು

ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಯಶೋಧಮ್ಮ ಮೃತದೇಹ ರವಾನಿಸಲಾಗಿದೆ. ಶಾಸಕ ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment