/newsfirstlive-kannada/media/post_attachments/wp-content/uploads/2024/06/chitrala.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಹಾಗೂ ಫೋಟೋವನ್ನು ಕಳುಹಿಸಿದ್ದ. ಹೀಗಾಗಿ ಇದೇ ಕೋಪದಲ್ಲಿ ನಟ ದರ್ಶನ್ ಮತ್ತು ಸಹಚರರು ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಬಹಳ ಕ್ರೂರವಾಗಿ ಕೊಲೆ ಮಾಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ:‘ರೇಣುಕಾಸ್ವಾಮಿ ನನಗೂ ಆ ಫೋಟೋ ಕಳುಹಿಸಿದ್ದ’- ಸಾಕ್ಷಿ ಸಮೇತ ಶಾಕಿಂಗ್ ವಿಷ್ಯ ಬಿಚ್ಚಿಟ್ಟ ನಟಿ ಚಿತ್ರಾಲ್!
ಇನ್ನು, ಮೊನ್ನೆಯಷ್ಟೇ ಇದೇ ವಿಚಾರದ ಬಗ್ಗೆ ಬಿಗ್‌ಬಾಸ್ ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದರು. ಈ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿ ರೇಣುಕಾಸ್ವಾಮಿ ಅವರದ್ದು ಎನ್ನಲಾದ ಅಕೌಂಟ್ ಫೋಟೋವನ್ನು ಸ್ಟೋರಿಯಲ್ಲಿ ಶೇರ್ ಮಾಡಿಕೊಂಡು ಅದರ ಬಗ್ಗೆ ಸವಿವರವಾಗಿ ಮಾತಾಡಿದ್ದರು.
ಇದೀಗ ನಟಿ ಚಿತ್ರಾಲ್ ರಂಗಸ್ವಾಮಿ ಅವರು ಪೊಲೀಸರ ಮೇಲೆ ಆರೋಪವೊಂದನ್ನು ಮಾಡಿದ್ದಾರೆ. ಈ ಬಗ್ಗೆ ನ್ಯೂಸ್ ಫಸ್ಟ್ನೊಂದಿಗೆ ಮಾತಾಡಿದ ಅವರು, ನಾನು ಶೇರ್ ಮಾಡಿಕೊಂಡ ಮೇಲೆ ಸಾಕಷ್ಟು ಜನರು ಆ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಧೈರ್ಯ ಇರುವುದಿಲ್ಲ. ನಾನೂ ಕೂಡ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಮಾರ್ಚ್ 13ನೇ ತಾರೀಕು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಿದ್ದೇನೆ. ಆ ಬಗ್ಗೆ ಏನೂ ಆಕ್ಷನ್ ತೆಗೆದುಕೊಂಡಿಲ್ಲ. ಈ ಹಿಂದೆ 25ಕ್ಕೂ ಹೆಚ್ಚು ಜನರು ಕೊರೋನಾ ಸಮಯದಲ್ಲಿ ಕೆಟ್ಟ ಟ್ರೋಲ್ ಪೇಜ್ಗಳ ಬಗ್ಗೆ ದೂರು ದಾಖಲಿಸಿದ್ದೇವೆ. ಆದರೆ ಅದರ ಬಗ್ಗೆ ಪೊಲೀಸರು ಯಾವುದೇ ರೀತಿಯಲ್ಲಿ ಆಕ್ಷನ್ ತೆಗೆದುಕೊಂಡಿಲ್ಲ. ನನಗೆ ಈಗ ಯಾವುದಾದರೂ ಬಂದ್ರೆ ಪೊಲೀಸರು ಆಕ್ಷನ್ ತೆಗೆದುಕೊಳ್ಳುತ್ತಾರೆ ಅಂತ ನನಗೆ ನಂಬಿಕೆ ಇಲ್ಲ ಸರ್ ಅಂತ ಅಸಮಧಾನ ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ