/newsfirstlive-kannada/media/post_attachments/wp-content/uploads/2024/06/pm-modi19.jpg)
ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಭಾರತದ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇದೊಂದು ಐತಿಹಾಸಿಕ ದಿನವಾಗಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿದ್ದಾರೆ.
/newsfirstlive-kannada/media/post_attachments/wp-content/uploads/2024/06/pm-modi4.jpg)
ನಾಲ್ಕು ಬಾರಿ ಮುಖ್ಯಮಂತ್ರಿ, ಮೂರು ಬಾರಿ ಪ್ರಧಾನಮಂತ್ರಿಯಾಗುವ ಮೂಲಕ ಹಲವು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ. ಇಂದು ತಮ್ಮ ಮೂರನೇ ಇನ್ನಿಂಗ್ಸ್​ಗೆ ಕಿಕ್​​ಸ್ಟಾರ್ಟ್​ ನೀಡಿದ್ದಾರೆ. ಮೋದಿ ಜೊತೆ ಹಲವರು ಸಚಿವರಾಗಿ ಸಂಪುಟ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: VIDEO: ಇಂಗ್ಲಿಷ್‌ನಲ್ಲಿ ಹೆಚ್.ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
/newsfirstlive-kannada/media/post_attachments/wp-content/uploads/2024/06/rajani2.jpg)
ರಾಷ್ಟ್ರಪತಿ ಭವನದ ಮುಂಭಾಗ ನಡೆದ ಸಮಾರಂಭಕ್ಕೆ ದೇಶ-ವಿದೇಶದ ಗಣ್ಯರು ಸಾಕ್ಷಿಯಾದರು. ಧಾರ್ಮಿಕ ಮುಖಂಡರು, ಬಾಲಿವುಡ್ ಸ್ಟಾರ್‌ಗಳು ಕೂಡ ಆಗಮಿಸಿದರು. ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಗಣ್ಯರು ಹಾಜರಾಗಿದ್ದರು.
/newsfirstlive-kannada/media/post_attachments/wp-content/uploads/2024/06/kangana5.jpg)
ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದಿರೋ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಿಂಚಿದರು.
/newsfirstlive-kannada/media/post_attachments/wp-content/uploads/2024/06/mallikarjun.jpg)
ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
/newsfirstlive-kannada/media/post_attachments/wp-content/uploads/2024/06/akshaya.jpg)
ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಪತ್ನಿ ಗೌರಿ ಖಾನ್ ಭಾಗಿಯಾಗಿದ್ದಾರೆ. ಜೊತೆಗೆ ಅಕ್ಷಯ್ ಕುಮಾರ್ ಅವರು ಕೂಡ ಭಾಗಿಯಾಗಿದ್ದರು.
/newsfirstlive-kannada/media/post_attachments/wp-content/uploads/2024/06/rajani.jpg)
ಸೂಪರ್​​ಸ್ಟಾರ್​​, ಹಿರಿಯ ನಟ ರಜನಿಕಾಂತ್ ಅವರು ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/06/akshaya1.jpg)
ಹಿರಿಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು.
/newsfirstlive-kannada/media/post_attachments/wp-content/uploads/2024/06/rajani4.jpg)
ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭರ್ಜರಿ ಗೆಲುವಿನ ನಂತರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/06/rajani1.jpg)
ಇನ್ನು, ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಸೇರಿ ಹಲವಾರು ಗಣ್ಯರು ಕಾಣಿಸಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/06/akshaya2.jpg)
ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಜಗದ್ಗುರು ರಾಮಾನಂದಾಚಾರ್ಯ ಸ್ವಾಮಿ ರಾಮಭದ್ರಾಚಾರ್ಯ ಜಿ ಮಹಾರಾಜ್ ಸೇರಿ ಹಲವಾರು ಸ್ವಾಮೀಜಿಗಳು ಆಗಮಿಸಿದ್ದಾರೆ. ದೇಶದ ಇತಿಹಾಸದಲ್ಲಿ 17ನೇ ಲೋಕಸಭೆ ಅವಧಿ ಮುಗಿದು 18ನೇ ಲೋಕಸಭಾ ಅವಧಿ ಶುರುವಾಗಿದೆ.
/newsfirstlive-kannada/media/post_attachments/wp-content/uploads/2024/06/pm-modi20.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us