newsfirstkannada.com

ನರೇಂದ್ರ ಮೋದಿ 3.O ದರ್ಬಾರ್‌.. ಅದ್ಧೂರಿ ಪದಗ್ರಹಣ ಸಮಾರಂಭದ ಟಾಪ್ 10 ಫೋಟೋ ಇಲ್ಲಿವೆ

Share :

Published June 9, 2024 at 10:13pm

Update June 9, 2024 at 10:17pm

  ಮೋದಿ ಸಂಪುಟದಲ್ಲಿ ಕರ್ನಾಟಕದ ಎಷ್ಟು ಮಂದಿಗೆ ಸ್ಥಾನ ಸಿಕ್ಕಿತು

  3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರೋ ಮೋದಿ

  ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ ನಟಿ ಕಂಗನಾ ರಣಾವತ್

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಭಾರತದ ಇತಿಹಾಸದಲ್ಲೇ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಇದೊಂದು ಐತಿಹಾಸಿಕ ದಿನವಾಗಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿದ್ದಾರೆ.

ನಾಲ್ಕು ಬಾರಿ ಮುಖ್ಯಮಂತ್ರಿ, ಮೂರು ಬಾರಿ ಪ್ರಧಾನಮಂತ್ರಿಯಾಗುವ ಮೂಲಕ ಹಲವು ಪ್ರಥಮಗಳಿಗೆ ನಾಂದಿ ಹಾಡಿದ್ದಾರೆ. ಇಂದು ತಮ್ಮ ಮೂರನೇ ಇನ್ನಿಂಗ್ಸ್​ಗೆ ಕಿಕ್​​ಸ್ಟಾರ್ಟ್​ ನೀಡಿದ್ದಾರೆ. ಮೋದಿ ಜೊತೆ ಹಲವರು ಸಚಿವರಾಗಿ ಸಂಪುಟ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ:  VIDEO: ಇಂಗ್ಲಿಷ್‌ನಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ರಾಷ್ಟ್ರಪತಿ ಭವನದ ಮುಂಭಾಗ ನಡೆದ ಸಮಾರಂಭಕ್ಕೆ ದೇಶ-ವಿದೇಶದ ಗಣ್ಯರು ಸಾಕ್ಷಿಯಾದರು. ಧಾರ್ಮಿಕ ಮುಖಂಡರು, ಬಾಲಿವುಡ್ ಸ್ಟಾರ್‌ಗಳು ಕೂಡ ಆಗಮಿಸಿದರು. ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಗಣ್ಯರು ಹಾಜರಾಗಿದ್ದರು.

ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದಿರೋ ಬಾಲಿವುಡ್‌ ನಟಿ ಕಂಗನಾ ರಣಾವತ್ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಿಂಚಿದರು.

ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಹಾಗೂ ಪತ್ನಿ ಗೌರಿ ಖಾನ್ ಭಾಗಿಯಾಗಿದ್ದಾರೆ. ಜೊತೆಗೆ ಅಕ್ಷಯ್ ಕುಮಾರ್ ಅವರು ಕೂಡ ಭಾಗಿಯಾಗಿದ್ದರು.

ಸೂಪರ್​​ಸ್ಟಾರ್​​, ಹಿರಿಯ ನಟ ರಜನಿಕಾಂತ್ ಅವರು ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಹಿರಿಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭರ್ಜರಿ ಗೆಲುವಿನ ನಂತರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು, ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಸೇರಿ ಹಲವಾರು ಗಣ್ಯರು ಕಾಣಿಸಿಕೊಂಡಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಜಗದ್ಗುರು ರಾಮಾನಂದಾಚಾರ್ಯ ಸ್ವಾಮಿ ರಾಮಭದ್ರಾಚಾರ್ಯ ಜಿ ಮಹಾರಾಜ್ ಸೇರಿ ಹಲವಾರು ಸ್ವಾಮೀಜಿಗಳು ಆಗಮಿಸಿದ್ದಾರೆ.  ದೇಶದ ಇತಿಹಾಸದಲ್ಲಿ 17ನೇ ಲೋಕಸಭೆ ಅವಧಿ ಮುಗಿದು 18ನೇ ಲೋಕಸಭಾ ಅವಧಿ ಶುರುವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನರೇಂದ್ರ ಮೋದಿ 3.O ದರ್ಬಾರ್‌.. ಅದ್ಧೂರಿ ಪದಗ್ರಹಣ ಸಮಾರಂಭದ ಟಾಪ್ 10 ಫೋಟೋ ಇಲ್ಲಿವೆ

https://newsfirstlive.com/wp-content/uploads/2024/06/pm-modi19.jpg

Load More