/newsfirstlive-kannada/media/media_files/2025/09/23/highcourt-2025-09-23-11-43-30.jpg)
ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್​​ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್​ ತಡೆ ನೀಡಿದೆ.
ಪರಭಾಷಾ ಸಿನಿಮಾಗಳ ಹಾವಳಿ, ಮಿತಿ ಮೀರಿದ ಟಿಕೆಟ್ ದರದ ವಿರುದ್ಧ ಇಡೀ ಇಂಡಸ್ಟ್ರಿ ಏಕರೂಪ ಟಿಕೆಟ್ ದರ ನಿಗದಿ ಮಾಡಬೇಕು ಎಂದು ದಶಕಗಳಿಂದ ಹೋರಾಟ ನಡೆದಿತ್ತು. ಹತ್ತಾರು ಬಾರಿ ಈ ವಿಚಾರವಾಗಿ ಚರ್ಚೆ, ವಾದ- ಪ್ರತಿವಾದಗಳು ನಡೆದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಏಕರೂಪದ ಟಿಕೆಟ್ ದರ ನಿಗದಿ ಮಾಡುತ್ತು.
ಬೆನ್ನಲ್ಲೇ 200 ರೂಪಾಯಿ ನಿಗದಿ ವಿರುದ್ಧ ವಿರೋಧ ಕೂಡ ವ್ಯಕ್ತವಾಗಿತ್ತು. ಬಿಗ್ ಬಜೆಟ್ ಸಿನಿಮಾಗಳಿಗೆ ಇದರಿಂದ ತೊಂದರೆ ಆಗಲಿದೆ ಎಂಬ ಚರ್ಚೆ ಶುರುವಾಯ್ತು. ಕೊನೆಗೆ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಆಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಪೀಠವು, ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಜೊತೆಗೆ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ.
ಇದನ್ನೂ ಓದಿ:ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ..! ಎಷ್ಟು ದಿನ ಮಳೆ?
'ಬಿಗ್ ಬಜೆಟ್' ಸಿನಿಮಾಗೆ ನಷ್ಟ ಯಾಕೆ..?
ಸ್ಯಾಂಡಲ್​​ವುಡ್​ನಲ್ಲೀಗ ಬ್ಯಾಕ್ ಟು ಬ್ಯಾಕ್ ದೊಡ್ಡ ಬಜೆಟ್ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಇಡೀ ದೇಶವೇ ಸ್ಯಾಂಡಲ್​ವುಡ್​ ಕಡೆ ನೋಡುವಂತಹ, ಹೈ ಬಜೆಟ್, ಹೈ ಕ್ವಾಲಿಟಿ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ಪಟ್ಟಿಯಲ್ಲಿ ಕಾಂತಾರ ಚಾಪ್ಟರ್ 1, ಟಾಕ್ಸಿಕ್, ಕೆಡಿ, 45, ದಿ ಡೆವಿಲ್, ಮಾರ್ಕ್.. ಹೀಗೆ ಸಾಲು ಸಾಲು ಸಿನಿಮಾಗಳಿವೆ.
ಈ ಚಿತ್ರಗಳಿಗೆ ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಲಾಗಿದ್ದು, ಈಗ ಏಕರೂಪದ ಬೆಲೆ ನಿಗದಿಯಿಂದ ನಿರ್ಮಾಪಕರಿಗೆ ನಷ್ಟವಾಗೋ ಭಯ ಇತ್ತು. ಇದಕ್ಕೆ ನಾನಾ ಕಾರಣಗಳೂ ಇವೆ. ಮೊದಲಿಗೆ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರ ಕೊರತೆ ಕಾಡುತ್ತಿದೆ. ಮತ್ತೊಂದೆಡೆ ವ್ಯಾವಹಾರಿಕ ಹಿನ್ನೆಲೆಯಲ್ಲಿ ನೋಡೋದಾದ್ರೆ ಬಂಡವಾಳ ರಿಕವರ್ ಮಾಡೋದೇ ದೊಡ್ಡ ತಲೆ ನೋವಾಗಿದೆ. ಒಂದೆಡೆ ಸ್ಯಾಟಲೈಟ್ ರೈಟ್ಸ್ ಖರೀದಿಸೋದು ಕಮ್ಮಿಯಾಗ್ತಿದ್ರೆ, ಮತ್ತೊಂದೆಡೆ ಓಟಿಟಿ ವೇದಿಕೆಗಳು ಕನ್ನಡ ಸಿನಿಮಾಗಳಂದ್ರೆ ದೂರ ಹೋಗುತ್ತಿವೆ. ಹೀಗಾಗಿ ಥಿಯೇಟರ್​​ನಿಂದ ಕಲೆಕ್ಟ್ ಹಣವನ್ನೇ, ನಿರ್ಮಾಪಕರು ನಂಬಿದ್ದಾರೆ. ಹೀಗಾಗಿ ಏಕರೂಪದ ಟಿಕೆಟ್ ದರ ನಿಗದಿ ವಿಚಾರವಾಗಿ ಅಪಸ್ವರ ಕೇಳಿ ಬಂದಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ