/newsfirstlive-kannada/media/media_files/2025/08/06/ramya-case-koppal-manjunatha-2025-08-06-16-34-37.jpg)
ರಮ್ಯ ಪ್ರಕರಣದಲ್ಲಿ ಬಂಧಿತ ಆರೋಪಿ
ಕೊಪ್ಪಳ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬನನ್ನು ಬೇಟೆಯಾಡಿದ್ದಾರೆ. ಮಂಜುನಾಥ ಬಂಧಿತ ಆರೋಪಿ.
ಕೊಪ್ಪಳದ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಮಾಡಿದ್ದ. ರಮ್ಯಾ ಅವರು ದೂರು ನೀಡಿದ ಕೆಲವೇ ದಿನಗಳಲ್ಲಿ ಮಂಜುನಾಥನ ಬಂಧನವಾಗಿದೆ.
ಇದನ್ನೂ ಓದಿ: ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡ ಮೋಹಕ ತಾರೆ.. ನಟಿ ರಮ್ಯಾ ಫೋಟೋ ಇಲ್ಲಿದೆ!
ಸ್ಯಾಂಡಲ್ವುಡ್ ಸ್ಟಾರ್ ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಅವರೆಲ್ಲರು ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ಹೋಗಿ 43 ಅಕೌಂಟ್ಗಳ ವಿರುದ್ಧ ದೂರು ದಾಖಲಿಸಿದ್ದರು.
ಏನಿದು ಕೇಸ್..?
ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್ ಮೀಡಿಯಾದಲ್ಲಿ ಮಾತನಾಡಿದ್ದರು. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದಿದ್ದರು.
ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ದರ್ಶನ್ ಫ್ಯಾನ್ಸ್ ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಅಶ್ಲೀಲವಾಗಿ ಕಮೆಂಟ್ಗಳನ್ನು ಮಾಡಿದ್ದರು. ಹೀಗಾಗಿ ರಮ್ಯಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೈಬರ್ ಠಾಣೆಗೆ ದೂರು ನೀಡಿದ್ದರು. ಇದೀಗ ಸೈಬರ್ ಕ್ರೈಮ್ ಪೊಲೀಸರು ಐಪಿ ಅಡ್ರೆಸ್ ಆಧರಿಸಿ ನಾಲ್ವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿರೋ ಆರೋಪಿಗಳು ಇವರೇ ನೋಡಿ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ