ಡಿವೋರ್ಸ್​ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?

ಸ್ಯಾಂಡಲ್​ವುಡ್​ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿತ್ತು. ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಕುರಿತು ಸ್ವತಹ ಅಜಯ್ ರಾವ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

author-image
Bhimappa
AJAI_RAO_WIFE
Advertisment

ಬೆಂಗಳೂರು: ಸ್ಯಾಂಡಲ್​ವುಡ್​ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿತ್ತು. ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಈ ಕುರಿತು ಸ್ವತಹ ಅಜಯ್ ರಾವ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. 

ಈ ಬಗ್ಗೆ ಪತ್ರ ಬರೆದಿರುವ ನಟ ಅಜಯ್ ರಾವ್ ಅವರು, ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು, ಹರಡುವುದನ್ನು ದೂರ ಇಡುವಂತೆ ವಿನಮ್ರತೆಯಿಂದ ವಿನಂತಿಸುತ್ತೇನೆ ಎಂದಿದ್ದಾರೆ. 

ಇದನ್ನೂ ಓದಿ:Big Breaking: ಸ್ಯಾಂಡಲ್​ವುಡ್ ಸ್ಟಾರ್​ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು?

AJAI_RAO

ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ. ಅವುಗಳನ್ನು ಖಾಸಗಿಯಾಗಿ ಉಳಿಯುವಂತೆ ಸಹಕರಸಿ ಎಂದು ಎಲ್ಲರಲ್ಲೂ ಹೃತ್ಪೂರ್ವಕ ವಿನಂತಿ ಎಂದು ಕೇಳಿಕೊಂಡಿದ್ದಾರೆ. ಹಾಗೇ ಅಭಿಮಾನಿಗಳ ಬೆಂಬಲ ನಮಗೆ ಅತ್ಯಂತ ಮುಖ್ಯ ಎಂದು ಪತ್ರದಲ್ಲಿ ಬರೆದು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ. 

ಇತ್ತೀಚೆಗೆ ಯುದ್ಧಕಾಂಡ- 2 ಸಿನಿಮಾ ನಿರ್ಮಾಣ ಮಾಡಿ, ನಟಿಸಿದ್ದ ನಟ ಅಜಯ್‌ ರಾವ್‌ ಅವರು ಒಂದಿಷ್ಟು ಸಾಲ ಮಾಡಿಕೊಂಡಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ನಟ, ಅದೆಲ್ಲ ಸುಳ್ಳು ಎಂದಿದ್ದರು. ಅಜಯ್ ರಾವ್ ಹಾಗೂ ಸ್ವಪ್ನಾ ಪ್ರೀತಿಸಿ 2014ರಲ್ಲಿ ಹೊಸೇಪಟೆಯಲ್ಲಿ ವಿವಾಹವಾಗಿದ್ದರು. ದಂಪತಿಗೆ ಮಗಳಿದ್ದು ಚೆನ್ನಾಗಿದ್ದೇವೆ ಎಂದು ಅಜಯ್ ರಾವ್ ಅವರು ತಿಳಿಸಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

actor Ajay Rao, divorce case
Advertisment