/newsfirstlive-kannada/media/media_files/2025/08/17/ajay-rao1-2025-08-17-17-16-29.jpg)
ಸ್ಯಾಂಡಲ್ವುಡ್ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿತ್ತು. ಪರಸ್ಪರ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಅಜಯ್ ರಾವ್ ಪ್ರತಿಕ್ರಿಯೆ ಕೊಟ್ಟಿದ್ದರು. ಇದೀಗ ಪತ್ನಿ ಸ್ವಪ್ನಾ ರಾವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?
ಈ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪತ್ರ ಬರೆದಿರುವ ನಟ ಅಜಯ್ ರಾವ್ ಪತ್ನಿ ಸ್ವಪ್ನಾ ಅವರು, ನಮಸ್ಕಾರ, ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೆ ಮತ್ತು ಸಹೋದರರೆ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆ ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ. ಎಂದು ತಿಳಿಸಲು ಬಯಸುತ್ತೇನೆ. ಕೃತಜ್ಞತೆಗಳೊಂದಿಗೆ ಸಪ್ನ ಅಜಯ್ ರಾವ್. ಹೀಗೆ ಬರೆದುಕೊಂಡಿರೋ ಅಜಯ್ ರಾವ್ ಪತ್ನಿ ಕಾಮೆಂಟ್ಸ್ ಬಾಕ್ಸ್ ಅನ್ನು ಆಫ್ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ