/newsfirstlive-kannada/media/media_files/2025/08/16/darshan6-2025-08-16-18-35-54.jpg)
ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿ ಎರಡು ದಿನಗಳು ಕಳೆದಿವೆ. ಈ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಭರ್ಜರಿ ಬ್ಯಾಚುಲರ್ಸ್ 2 ಮುಕ್ತಾಯದ ಬೆನ್ನಲ್ಲೇ ಪ್ರವೀಣ್​ ಜೈನ್ ಮನೆಗೆ ಹೊಸ ಅತಿಥಿ ಆಗಮನ.. ಏನದು..?
ವಿಜಯಲಕ್ಷ್ಮಿ ಅವರು ದರ್ಶನ್ ಅವರ ಫೋಟೋವನ್ನು ಶೇರ್ ಮಾಡಿಕೊಂಡು ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ ಎಂದು ಮೊದಲು ಬರೆದುಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ..
ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುವುದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ನಿಮ್ಮ ಪ್ರೀತಿಯ
ದಾಸ.
ಭಾವುಕ ಪೋಸ್ಟ್​ ಶೇರ್ ಮಾಡಿದ್ದ ಪತ್ನಿ ವಿಜಯಲಕ್ಷ್ಮಿ
ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ನಲ್ಲಿ ಇಂದು ಮದ್ಯಾಹ್ನ ಭಾವುಕ ಪೋಸ್ಟ್​ ಹಾಕಿಕೊಂಡಿದ್ದರು. ಏಕಾಂಗಿಯಾಗಿ ದರ್ಶನ್​ ನಿಂತುಕೊಂಡಿದ್ದ ಫೋಟೋ ಶೇರ್ ಮಾಡಿ ಪತ್ನಿ ವಿಜಯಲಕ್ಷ್ಮಿ ಕ್ಯಾಪ್ಶನ್​​ನಲ್ಲಿ ಒಡೆದ ಹೃದಯ ಸಿಂಬಲ್ ಹಾಕಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us