ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು.. ಸುಪ್ರೀಂ ಕೋರ್ಟ್​ ಆದೇಶದಂತೆ ಕೂಡಲೇ ಬಂಧಿಸಲು ಕ್ರಮ

ರೇಣುಕಾಸ್ವಾಮಿ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಅನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಪೀಠ ಈ ಮಹತ್ವದ ಆದೇಶ ನೀಡಿದ್ದಾರೆ.

author-image
Bhimappa
ದರ್ಶನ್ ಅಭಿಮಾನಿಗಳಿಗೆ ದೀಪಾವಳಿ ಹಬ್ಬ; ಜಾಮೀನು ಮಂಜೂರು ಬೆನ್ನಲ್ಲೇ ಫುಲ್ ಖುಷ್
Advertisment

ಬೆಂಗಳೂರು: ರೇಣುಕಾಸ್ವಾಮಿ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಅನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಪೀಠ ಈ ಮಹತ್ವದ ಆದೇಶ ನೀಡಿದ್ದಾರೆ. ಅಲ್ಲದೇ ಈ ಕೂಡಲೇ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳು ಜೈಲಿಗೆ ಹೋಗಬೇಕಿದೆ. 

ಕರ್ನಾಟಕದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದರು. ಈ ಬಗ್ಗೆ ವಿಚಾರಣೆ ಮಾಡಿದ್ದ ಸುಪ್ರೀಂ, ಕರ್ನಾಟಕ ಹೈಕೋರ್ಟ್​ನ ತೀರ್ಪಿನಲ್ಲಿ ದೋಷವಿದೆ ಎಂದು ಹೇಳಿದೆ. ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟ್ ಸೇದಿದ್ದನ್ನ ತಿಳಿಸಲಾಗಿತ್ತು. ಇದಕ್ಕೆ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇನ್ನೊಮ್ಮೆ ಇದೇ ರೀತಿ ಆದರೆ ಗೃಹ ಇಲಾಖೆಯನ್ನು ಇಲ್ಲಿಗೆ ಕರೆಸಬೇಕಾಗುತ್ತದೆ ಎಂದು ಸುಪ್ರೀಂ ಹೇಳಿದೆ. 

ಇದನ್ನೂ ಓದಿ: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು.. ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ​ ಜಾಮೀನು ರದ್ದು

darshan(2)

ಇದರ ಜೊತೆಗೆ ಹೈಕೋರ್ಟ್ ನೀಡಿರುವ ಜಾಮೀನು ಅನ್ನು ರದ್ದುಗೊಳಿಸಲಾಗಿದ್ದು ತಕ್ಷಣದಿಂದಲೇ ದರ್ಶನ್ ಹಾಗೂ ಪವಿತ್ರಾ ಗೌಡರನ್ನು ಜೈಲಿಗೆ ಹಾಕಬೇಕು ಎಂದು ಕೋರ್ಟ್ ಹೇಳಿದೆ. ಇನ್ನು ಸುಪ್ರೀಂಕೋರ್ಟ್​ನ ತೀರ್ಪಿನ ಆದೇಶದ ಪ್ರತಿ ಸಿಕ್ಕ ಬಳಿಕ ಅಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಳ್ಳಲ್ಲಿದ್ದಾರೆ. ಹೀಗಾಗಿ ಆರೋಪಿಗಳನ್ನು ಅರೆಸ್ಟ್ ಮಾಡಲು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Pavitra Gowda
Advertisment