/newsfirstlive-kannada/media/media_files/2025/12/21/kiara-advani-toxic-2025-12-21-14-25-01.jpg)
ಟಾಕ್ಸಿಕ್ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ರಾಕಿಂಗ್ ಸ್ಟಾರ್​ಗೆ ನಾಯಕಿ ಆಗಿರೋ ಕಿಯಾರಾ ಅಡ್ವಾಣಿ, ಸಿನಿಮಾದ ಪ್ರಮುಖ ಪಾತ್ರವಾಗಿರೋ ನಾಡಿಯಾ ಪಾತ್ರದಲ್ಲಿ ನಟಿಸ್ತಿದ್ದಾರೆ.
2026ರ ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರದ ಪ್ರಚಾರ ಕಾರ್ಯ ಜೋರಾಗಿದೆ. ಇದೀಗ ಚಿತ್ರತಂಡ ಫಸ್ಟ್​ಲುಕ್ ರಿಲೀಸ್ ಮಾಡಿದ್ದು, ಗ್ಲಾಮರಸ್ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಸರ್ಕಸ್ ಬ್ಯಾಗ್ರೌಂಡ್​ನಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಕಿಯಾರಾ ಮುಖದಲ್ಲಿ ಏನೋ ಆತಂಕ ಕಾಣ್ತಿದೆ.
ಗೀತು ಮೋಹನ್​ದಾಸ್ ನಿರ್ದೇಶನದ ಚಿತ್ರ ಇದಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ. ನಾಡಿಯಾ ಪಾತ್ರದ ಬಗ್ಗೆ ಮಾತನ್ನಾಡಿರುವ ನಿರ್ದೇಶಕರು.. ಕೆಲವು ಪಾತ್ರಗಳು ಸಿನಿಮಾಗೆ ಮಾತ್ರ ಸೀಮಿತ ಅಲ್ಲ. ಅವು ಕಲಾವಿದರಿಗೂ ಹೊಸ ಆಯಾಮ ನೀಡುತ್ತವೆ. ಈ ಪಾತ್ರಕ್ಕೆ ಕಿಯಾರಾ ಅಡ್ವಾಣಿ ಅವರು ನ್ಯಾಯ ಒದಗಿಸಿದ್ದಾರೆ. ಅದಕ್ಕಾಗಿ ನನಗೆ ಹೆಮ್ಮೆ ಇದೆ’ ಎಂದಿದ್ದಾರೆ.
ಇದನ್ನೂ ಓದಿ:ನಾವೆಲ್ಲರೂ ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಸುಮ್ನಿದ್ದೆ, ಬಾಯಿ ಇಲ್ಲ ಎಂದಲ್ಲ -ಕಿಚ್ಚ ಸುದೀಪ್ ವಾರ್ನಿಂಗ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us