/newsfirstlive-kannada/media/media_files/2025/08/15/rachitha-ram-and-rajini-2025-08-15-16-58-46.jpg)
ಆಗಸ್ಟ್ 14 ಸೂಪರ್ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕೂಲಿ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಂಡಿತ್ತು. ಸೂಪರ್ ಸ್ಟಾರ್ನನ್ನು ಮತ್ತೆ ತೆರೆ ಮೇಲೆ ನೋಡಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಭಾರೀ ಸ್ಫೋಟ; ಜೀವ ಬಿಟ್ಟ ಬಾಲಕ, 9 ಮಂದಿ ಗಂಭೀರ
ಅಷ್ಟೇ ಅಲ್ಲದೇ ಕೂಲಿ ಸಿನಿಮಾದಲ್ಲಿ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ನಟಿಸಿದ್ದು ಎಲ್ಲರಿಗೂ ಖುಷಿ ಕೊಟ್ಟಿದೆ. ಹೌದು, ಸರ್ಪ್ರೈಸ್ ಎಂಬಂತೆ ಕೂಲಿ ಸಿನಿಮಾದಲ್ಲಿ ಕಲ್ಯಾಣಿ ಎಂಬ ಪಾತ್ರದಲ್ಲಿ ನಟಿ ರಚಿತಾ ರಾಮ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಮೊದ ಮೊದಲು ಪಾಪದ ಹುಡುಗಿಯಾಗಿ ಕಾಣಿಸಿಕೊಂಡ ರಚ್ಚು ತದನಂತರ ರೆಬೆಲ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಇದೇ ಮೊದಲು ಬಾರಿಗೆ ರಚಿತಾ ರಾಮ್ ಅವರ ನಟನೆಗೆ ಅಭಿಮಾನಿಗಳು ಫುಲ್ ಮಾರ್ಕ್ಸ್ ಕೊಡುತ್ತಿದ್ದಾರೆ.
ಸಿನಿಮಾ ರಿಲೀಸ್ ಆಗಿರೋ ಖುಷಿಯಲ್ಲಿ ನಟಿ ರಚಿತಾ ರಾಮ್ ಸೂಪರ್ ಸ್ಟಾರ್ ಜೊತೆಗೀನ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಜಿನಿ ಜೊತೆಗೆ ಅಪ್ಪಿಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆ ಫೋಟೋ ಜೊತೆಗೆ ‘‘ಈ ಫೋಟೋ ನನ್ನ ಗ್ಯಾಲರಿಯಲ್ಲಿ ಅಡಗಿತ್ತು. ಇದನ್ನೂ ಹಂಚಿಕೊಳ್ಳಲು ಸೂಕ್ತ ಕ್ಷಣಕ್ಕಾಗಿ ಕಾಯುತ್ತಿದ್ದೆ ರಜಿನಿ ಸರ್, ಲವ್ ಯೂ’’ ಎಂದು ಬರೆದುಕೊಂಡಿದ್ದಾರೆ.
ಇನ್ನೂ, ಇದೇ ಫೋಟೋ ಜೊತೆಗೆ ರಚಿತಾ ರಾಮ್ ಅಭಿನಯದ ಬಗ್ಗೆ ಅಭಿಮಾನಿಗಳು ಕಾಮೆಂಟ್ಸ್ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕೂಲಿಯಲ್ಲಿ ಅದ್ಭುತ ಅಭಿನಯ, ನೀವು ಹಾಗೇ ಅಭಿನಯಿಸುತ್ತೀರಾ ಅಂತ ಎಂದಿಗೂ ನಿರೀಕ್ಷಿಸಿರಲಿಲ್ಲ ಮೇಡಂ, ಅಳುವುವವರನ್ನು ಯಾವತ್ತು ನಂಬಬಾರದು ಅಂತ ನಟಿಯ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಇನ್ನೂ, 2013ರಲ್ಲಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್ ಈಗ ಕನ್ನಡದ ಬಹು ಬೇಡಿಕೆಯ ನಟಿ ಎನಿಸಿಕೊಂಡರು. 2022ರಲ್ಲಿ ಟಾಲಿವುಡ್‌ಗೆ ಪ್ರವೇಶಿಸಿದ್ದ ಅವರು ಈ ವರ್ಷ ಕೂಲಿ ಸಿನಿಮಾ ಮೂಲಕ ಕಾಲಿವುಡ್‌ಗೂ ಪದಾರ್ಪಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ