/newsfirstlive-kannada/media/media_files/2025/08/17/ramya-on-darshan-fans-2025-08-17-14-35-00.jpg)
ಸ್ಯಾಂಡಲ್ವುಡ್ ಸ್ಟಾರ್ ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಅವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ಹೋಗಿ 43 ಅಕೌಂಟ್ಗಳ ವಿರುದ್ಧ ದೂರು ದಾಖಲಿಸಿದ್ದರು. ಆ ಬೆನ್ನಲ್ಲೇ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ನಟಿ ರಮ್ಯಾ, ಈಗ ಕೆಟ್ಟ ಕಾಮೆಂಟ್ಗಳು ಬರ್ತಿಲ್ಲ. ಹೆಣ್ಣು ಮಕ್ಕಳಿಗೆ ಧೈರ್ಯ ಬಂದಿದೆ. ಎಷ್ಟೋ ಜನ ಫೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ನಾನು ಹೇಳೋದು ಇಷ್ಟೇ ಜೀವನದಲ್ಲಿ ಏನಾದ್ರೂ ಒಳ್ಳೆದು ಮಾಡಿ. ಮಹಿಳೆಯರಿಗೆ, ತಂದೆ ತಾಯಿಗೆ ಗೌರವ ಕೋಡೋದನ್ನು ಕಲಿಯಿರಿ. ಒಳ್ಳೆಯ ಕೆಲಸ ಹುಡುಕಿ ಬ್ಯುಸಿಯಾಗಿರಿ ಎಂದು ಬುದ್ಧಿ ಮಾತು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ