/newsfirstlive-kannada/media/post_attachments/wp-content/uploads/2023/11/Kantara.jpg)
ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಬಿಡುಗಡೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಉಳಿದಿದೆ. ಸಿನಿಮಾದ ಕೊನೆಯ ಪ್ರಿಂಟ್ ಬಹುತೇಕ ರೆಡಿಯಾಗಿದ್ದು ಸಿನಿಮಾದ ಪ್ರಚಾರ ಕಾರ್ಯ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಪ್ಯಾನ್ ಇಂಡಿಯಾ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸಹ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇತ್ತ ಕಾಂತಾರ ಚಾಪ್ಟರ್ 1 ಬಿಡುಗಡೆಗೂ ಮುನ್ನ ಮಾರುಕಟ್ಟೆಯಲ್ಲಿ ಅಬ್ಬರದ ವ್ಯವಹಾರ ಮಾಡುತ್ತಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ. ಇತ್ತ ಬಿಡುಗಡೆಗೂ ಮುನ್ನವೇ ಕಾಂತಾರ ಚಾಪ್ಟರ್ 1 ಸಿನಿಮಾದ ಎಲ್ಲಾ ಭಾಷೆಗಳ ಓಟಿಟಿ ರೈಟ್ಸ್ ಅಮೇಜಾನ್ ಪ್ರೈಮ್ಗೆ ಮಾರಾಟವಾಗಿದೆ. ಸಿನಿಮಾ ಬಿಡುಗಡೆ ಆದ ಎಂಟು ವಾರಗಳ ನಂತರ ಓಟಿಟಿಯಲ್ಲಿ ಕಾಂತಾರ ಚಾಪ್ಟರ್ 1 ಸಿನಿಮಾ ಸ್ಟ್ರೀಮಿಂಗ್ ಆಗಲಿದೆ. ಬರೋಬ್ಬರಿ ₹ 125 ಕೋಟಿಗೆ ಓಟಿಟಿ ರೈಟ್ಸ್ ಸೇಲ್ ಆಗಿದೆ.
ಇದನ್ನೂ ಓದಿ:ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ FIR, ಆಗಿದ್ದೇನು..?
ಇಂಡಿಯಾ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸಹ ಏಕಕಾಲಕ್ಕೆ ಅಕ್ಟೋಬರ್ 2ರಂದು ಕಾಂತಾರ ಚಾಪ್ಟರ್ 1 ಬಿಡುಗಡೆ ಆಗಲಿದೆ. ಭಾರತ ಸೇರಿದಂತೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಇನ್ನೂ ಹಲವೆಡೆ ಕಾಂತಾರ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗಲಿದೆ.
ಕಾಂತಾರ ಚಾಪ್ಟರ್ 1 ಸಿನಿಮಾ ಈ ಹಿಂದೆ ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿದೆ. ‘ಕಾಂತಾರ’ ಸಿನಿಮಾದ ಐದಾರು ಪಟ್ಟು ಹೆಚ್ಚಿನ ಬಂಡವಾಳವನ್ನ ಕಾಂತಾರ ಚಾಪ್ಟರ್ 1ಕ್ಕೆ ಹಾಕಲಾಗಿದೆ. ಸಿನಿಮಾನಲ್ಲಿ ರುಕ್ಮಿಣಿ ವಸಂತ್ ನಾಯಕಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್ ತಂತ್ರಜ್ಞರು ಕೆಲಸ ಮಾಡಿದ್ದಾರೆ. ಸಿನಿಮಾ ಅಕ್ಟೋಬರ್ 02 ರಂದು ಬಿಡುಗಡೆ ಆಗಲಿದೆ.
ಇದನ್ನೂ ಓದಿ :ವಿನಯ್ ರಾಜ್ ಕುಮಾರ್ ನನ್ನ ತಮ್ಮ ಇದ್ದಂತೆ -ನಟಿ ರಮ್ಯಾ ಸ್ಪಷ್ಟನೆ