ಕನ್ನಡದ ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬವನ್ನು ಮೈಸೂರಿನಲ್ಲಿ ಆಚರಿಸಲಾಯಿತು. ಈ ಸಂಭ್ರಮದಲ್ಲಿ ರಾಜಕೀಯ, ಸಿನಿಮಾ ಮುಂತಾದ ಕ್ಷೇತ್ರದ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್, ಕಿಚ್ಚ ಸುದೀಪ್ ಸೇರಿ ಮುಂತಾದವರು ಆಗಮಿಸಿದ್ದರು. ಕಾರ್ಯಕ್ರಮದ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಅವರು, ಕಿಚ್ಚ ಸುದೀಪ್ರನ್ನು ಕರೆದು ಮಾತನಾಡಿಸಿದರು. ಸಿಎಂ, ಕರೆದು ಮಾತನಾಡಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಕಾರ್ಯಕ್ರಮಕ್ಕೂ ಮುನ್ನ ಸುದೀಪ್ ದಂಪತಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆಯಿತು. ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ