ದರ್ಶನ್ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್​ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್​, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳು ಜೈಲು ಸೇರಿ ಎರಡು ದಿನಗಳು ಕಳೆದಿವೆ. ಇದೇ ವೇಳೆ ಪತ್ನಿ ವಿಜಯಲಕ್ಷ್ಮಿ ದರ್ಶನ್ ದರ್ಶನ್​ ಬೆನ್ನಿಗೆ ನಿಂತಿದ್ದಾರೆ.

author-image
Veenashree Gangani
darshan vij
Advertisment

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್​ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ದರ್ಶನ್​, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳು ಜೈಲು ಸೇರಿ ಎರಡು ದಿನಗಳು ಕಳೆದಿವೆ. ಇದೇ ವೇಳೆ ಪತ್ನಿ ವಿಜಯಲಕ್ಷ್ಮಿ ದರ್ಶನ್ ದರ್ಶನ್​ ಬೆನ್ನಿಗೆ ನಿಂತಿದ್ದಾರೆ.

ಇದನ್ನೂ ಓದಿ:ಡಿವೋರ್ಸ್​ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?

Darshan in jail photos

ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟೀವ್​ ಆಗಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಪರ ಅಖಾಡಕ್ಕೆ ಇಳಿದಿದ್ದಾರೆ. ಇನ್ಮುಂದೆ ದರ್ಶನ್ ಅವರ  ಸೋಷಿಯಲ್​ ಮೀಡಿಯಾವನ್ನು ಪತ್ನಿ ವಿಜಯಲಕ್ಷ್ಮಿ ಅವರೇ ಹ್ಯಾಂಡಲ್ ಮಾಡಲಿದ್ದಾರೆ. ಈ ಬಗ್ಗೆ ದರ್ಶನ್ ಸಾಮಾಜಿಕ ಜಾಲತಾಣದಿಂದ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: ಈ ಬಾರಿಯ ಬಿಗ್​ಬಾಸ್​​ಗೆ ಅನಯಾ ಬಂಗಾರ್ ಎಂಟ್ರಿ..?

ಇದರ ಜೊತೆಗೆ ದರ್ಶನ್ ಪತ್ನಿ ಅಭಿಮಾನಿಗಳಿಗೆ ಭರವಸೆ ತುಂಬಿದ್ದಾರೆ. ‘‘ನಿಮ್ಮ ಚಾಲೆಂಜಿಂಗ್ ಸ್ಟಾರ್ ನಿಮ್ಮೆಲ್ಲರನ್ನೂ ತನ್ನ ಹೃದಯದಲ್ಲಿ ಹೊತ್ತುಕೊಂಡಿದ್ದಾರೆ. ಅವರು ಹಿಂತಿರುಗುವವರೆಗೆ, ಅವರ ಪರವಾಗಿ ನಾನು ಅವರ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುತ್ತೇನೆ. ಅವರ ಚಲನಚಿತ್ರ ಪ್ರಚಾರಗಳನ್ನ ಹಂಚಿಕೊಳ್ಳುತ್ತೇನೆ. ನೀವು ತೋರಿಸುತ್ತಿರುವ ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಅಪಾರ ಶಕ್ತಿಯನ್ನು ನೀಡುತ್ತದೆ.  ಆ ಏಕತೆ ಮತ್ತು ಸಕಾರಾತ್ಮಕತೆಯನ್ನು ಉಳಿಸಿಕೊಳ್ಳೋಣ. ನೀವು ಯಾವಾಗಲೂ ತಿಳಿದಿರುವ ಅದೇ ಪ್ರೀತಿ ಮತ್ತು ಶಕ್ತಿಯೊಂದಿಗೆ ಅವರು ಶೀಘ್ರದಲ್ಲೇ ಹಿಂತಿರುಗುತ್ತಾರೆ’’ ಎಂದು ಬರೆದುಕೊಂಡಿದ್ದಾರೆ.

ಇನ್ನು, ನಿನ್ನೆ ವಿಜಯಲಕ್ಷ್ಮಿ ಅವರು ದರ್ಶನ್ ಅವರ ಫೋಟೋವನ್ನು ಶೇರ್ ಮಾಡಿಕೊಂಡು ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ ಎಂದು ಪೋಸ್ಟ್​ವೊಂದನ್ನು ಶೇರ್ ಮಾಡಿದ್ದರು. 

ಇದನ್ನೂ ಓದಿ:ಡಿವೋರ್ಸ್​ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?

ಎಲ್ಲರಿಗೂ ನಮಸ್ಕಾರ.. 

‘‘ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ. ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗೂ ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ “ ದಿ ಡೆವಿಲ್ “ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುವುದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ. ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು’’. 

ನಿಮ್ಮ ಪ್ರೀತಿಯ 
ದಾಸ.

ಭಾವುಕ ಪೋಸ್ಟ್​ ಶೇರ್ ಮಾಡಿದ್ದ ಪತ್ನಿ ವಿಜಯಲಕ್ಷ್ಮಿ

ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಇತ್ತ ಪತ್ನಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಮ್​ನಲ್ಲಿ ಇಂದು ಮದ್ಯಾಹ್ನ ಭಾವುಕ ಪೋಸ್ಟ್​ ಹಾಕಿಕೊಂಡಿದ್ದರು. ಏಕಾಂಗಿಯಾಗಿ ದರ್ಶನ್​ ನಿಂತುಕೊಂಡಿದ್ದ ಫೋಟೋ ಶೇರ್ ಮಾಡಿ ಪತ್ನಿ ವಿಜಯಲಕ್ಷ್ಮಿ ಕ್ಯಾಪ್ಶನ್​​ನಲ್ಲಿ ಒಡೆದ ಹೃದಯ ಸಿಂಬಲ್ ಹಾಕಿಕೊಂಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan
Advertisment