ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿವೆ: ಹೀಗಾಗಿ ಜನರೂ ಕನ್ನಡ ಸಿನಿಮಾಗಳಿಂದ ದೂರವಾಗಿದ್ದಾರೆ: ಕೆ.ವಿ.ಪ್ರಭಾಕರ್

ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿರುವುದರಿಂದಲೇ ಜನರೂ ಕನ್ನಡ ಸಿನಿಮಾಗಳಿಂದ ದೂರವಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

author-image
Ganesh Kerekuli
film festival bengaluru (1)
Advertisment

ಬೆಂಗಳೂರು: ನಮ್ಮ ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿರುವುದರಿಂದಲೇ ಜನರೂ ಕನ್ನಡ ಸಿನಿಮಾಗಳಿಂದ ದೂರವಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. 

17ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ "ಕನ್ನಡ ಸಿನಿ‌ ಪಯಣದ 50 ವರ್ಷಗಳ ಸುವರ್ಣ ಸಂಭ್ರಮ" ದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿಂದೆಲ್ಲಾ ಸಿನಿಮಾಗಳು, ಸಿನಿಮಾದ ಪಾತ್ರಗಳು ನಮ್ಮ ಬದುಕಿನ‌ ಭಾಗ ಆಗಿರುತ್ತಿದ್ದವು. ಹೀಗಾಗಿ ಜನರು ಕನ್ನಡ ಸಿನಿಮಾಗಳಿಗೆ ಮುಗಿ ಬೀಳುತ್ತಿದ್ದರು. ಆಗ ಯಾವ ಹೀರೋಗಳೂ ಇವತ್ತಿನ ಹೀರೋಗಳಂತೆ ನಮ್ಮ ಸಿನಿಮಾ ನೋಡಿ ಎಂದು ಗೋಗರೆಯುತ್ತಿರಲಿಲ್ಲ. ಹಿಂದಣ ಹೆಜ್ಜೆಯನ್ನರಿಯದವನು ಮುಂದನ ಹೆಜ್ಜೆಯನ್ನಿಡಲಾರನು ಎಂದರು. 

ಇದನ್ನೂ ಓದಿ: ಎಂಎಸ್‌ಎಂಇ ಗಳಿಗೆ 20 ಲಕ್ಷದವರೆಗೂ ಅಡಮಾನ ರಹಿತ ಸಾಲ: ಸೈಬರ್ ವಂಚನೆಗಳಿಗೆ 25 ಸಾವಿರ ಪರಿಹಾರಕ್ಕೆ ಆರ್‌ಬಿಐ ಪ್ರಸ್ತಾಪ

film festival bengaluru

ಈಗ ಒಂದು ಸಿನಿಮಾ ತೆರೆ ಕಾಣುತ್ತಿದ್ದಂತೆ ನಾಯಕ ನಟರು ಅವರವರೇ ಸ್ವಘೋಷಿತ ಸ್ಟಾರ್ ಗಳಾಗಿ ಬಿಡುತ್ತಾರೆ. ಇವೆಲ್ಲವೂ ನಮ್ಮ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಬೇರುಗಳಿಂದ ಬೇರ್ಪಟ್ಟಿದ್ದರ ದುಷ್ಪರಿಣಾಮ ಎಂದು ಬೇಸರ ವ್ಯಕ್ತಪಡಿಸಿದರು.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ "ಸಿನಿ ಪಯಣದ ಸುವರ್ಣ ಸಂಭ್ರಮ‌"ಕ್ಕಾಗಿ ವೇದಿಕೆ ಕಲ್ಪಿಸಿರುವುದು ನಿಜಕ್ಕೂ ಅರ್ಥಪೂರ್ಣ ಸಂಗತಿ. 50 ವರ್ಷಗಳ ಕನ್ನಡ ಸಿನಿಮಾ ಪಯಣವನ್ನು ಮೆಲುಕು ಹಾಕುತ್ತಲೇ, ಈ 50 ವರ್ಷಗಳಲ್ಲಿ ಕನ್ನಡ ಸಿನಿಮಾ ಪರಂಪರೆಯನ್ನು ಗಟ್ಟಿಗೊಳಿಸಿದ ಐದು ಮಂದಿ ಹಿರಿಯರನ್ನು ಗುರುತಿಸಿದ್ದೇವೆ.

ಪಾರ್ವತಮ್ಮ ರಾಜ್ ಕುಮಾರ್ , ಎಸ್. ರಾಮಚಂದ್ರ, ಗಿರೀಶ್ ಕಾಸರವಳ್ಳಿ, ಎಸ್.ವಿ.ರಾಜೇಂದ್ರಸಿಂಗ್ ಬಾಬು, ಡಾ.ಜಯಮಾಲ ಅವರ ಕೊಡುಗೆಗಳನ್ನು ನಾವು ಗುರುತಿಸುತ್ತಿದ್ದೇವೆ ಎಂದರು.  ಈ ಐದು ಮಂದಿಯ ಸಾಧನೆಗಳನ್ನು ಮೆಲುಕು ಹಾಕುವುದೆಂದರೆ ಇಡೀ ಕನ್ನಡ ಸಿನಿಮಾ ಪರಂಪರೆಯ ಅರ್ಧ ಶತಮಾನವನ್ನು ಹಿಂದಿರುಗಿ ನೋಡಿದಂತೆ ಎಂದರು. 

ಇದನ್ನೂ ಓದಿ:ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಹೆಬ್ಬಾಳಕರ್..!

film festival bengaluru (2)

ಗಿರೀಶ್ ಕಾಸರವಳ್ಳಿ ಅವರು ಕನ್ನಡಕ್ಕೆ ನಾಲ್ಕು ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ ತಂದು ಕೊಟ್ಟಿದ್ದು ಮಾತ್ರವಲ್ಲದೆ, ಕನ್ನಡ ಸಿನಿಮಾಗಳ ಘನತೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಖ್ಯಾತ ಛಾಯಾಗ್ರಾಹಕರಾದ ಎಸ್.ರಾಮಚಂದ್ರ ಅವರು ಕನ್ನಡದ ಪರ್ಯಾಯ ಚಿತ್ರಗ ಳ ಪರಂಪರೆಯ ನೆರಳು- ಬೆಳಕು ಇದ್ದ ಹಾಗೆ. ಅರ್ಧ ಶತಮಾನದ ಪರ್ಯಾಯ ಸಿನಿಮಾಗಳಿಗಾಗಿ ಕನ್ನಡಕ್ಕೆ ಸಿಕ್ಕಿರುವ ಮಾನ್ಯತೆಗಳ ಹಿಂದೆ  ಎಸ್.ರಾಮಚಂದ್ರ ಅವರ ಕ್ಯಾಮರಾ ಕಣ್ಣುಗಳು ಇವೆ ಎಂದರು.

ಪಾರ್ವತಮ್ಮ ರಾಜ್ ಕುಮಾರ್ ಅವರು ಪೂರ್ಣಿಮಾ ಎಂಟರ್ ಪ್ರೈಸಸ್ ಮೂಲಕ 80 ಕ್ಕೂ ಹೆಚ್ಚು ಸದಭಿರುಚಿಯ ಜೊತೆಗೆ ಜನಪ್ರಿಯ ಸಿನಿಮಾಗಳನ್ನು ಕನ್ನಡ ಜಗತ್ತಿಗೆ ಮತ್ತು ಸಿನಿಮಾ ಜಗತ್ತಿಗೆ ನೀಡಿದವರು. ಏಕ ಕಾಲಕ್ಕೆ ಯಶಸ್ವಿ ಮತ್ತು ಸಮಾಜಮುಖಿಯಾದ ಸದಭಿರುಚಿಯ ಸಿನಿಮಾಗಳನ್ನು ನೀಡಿ ಗೆಲ್ಲುವುದು ಸುಲಭದ ಮಾತಲ್ಲ. ಈ ಸಾಹಸದಲ್ಲಿ ಪಾರ್ವತಮ್ಮ ಅವರು ಎಲ್ಲಾ ಸವಾಲುಗಳನ್ನು ಎದುರಿಸಿ ಗೆದ್ದಿದ್ದಾರೆ. ಕನ್ನಡ ಬೆಳ್ಳಿ ಪರದೆಯನ್ನು ಗೆಲ್ಲಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. 

ಜಯಮಾಲ ಅವರು ತುಳು ಸಿನಿಮಾಗಳ ಮೂಲಕ ಸಿನಿಮಾ ಪ್ರಪಂಚಕ್ಕೆ ಬಂದರು. ಭೂತಯ್ಯನ ಮಗ ಅಯ್ಯು ಸಿನಿಮಾದ ಹಾಡೊಂದರ ಮೂಲಕ ಕನ್ನಡಕ್ಕೆ ಬಂದು ಕನ್ನಡ ಸಿನಿಮಾ ಜಗತ್ತನ್ನು ಬೆಳಗಿಸಿದರು. ತಾವೂ ಬೆಳಗಿದರು. ಜಯಮಾಲ ಅವರು ಕೇವಲ ನಟಿ ಮಾತ್ರವಲ್ಲ. ನಿರ್ಮಾಪಕಿ ಆಗಿಯೂ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ಒದಗಿಸಿದ್ದಾರೆ.  "ತಾಯಿ ಸಾಹೇಬ" ಸಿನಿಮಾದ ನಿರ್ಮಾಪಕಿಯೂ ಆಗಿ, ನಟಿಯೂ ಆಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ತಂದು ಕೊಟ್ಟಿದ್ದಾರೆ.‌ ಜೊತೆಗೆ ಮಹಿಳಾ ಸಂವೇದನೆ ವಿಷಯದಲ್ಲಿ PHd ಮಾಡಿ ಡಾ.ಜಯಮಾಲ ಆಗಿದ್ದಾರೆ ಎಂದರು.

ಇದನ್ನೂ ಓದಿ:15 ಸಿಕ್ಸರ್, 15 ಬೌಂಡರಿ! U-19 ವಿಶ್ವಕಪ್ ಫೈನಲ್​ನಲ್ಲಿ ಸೂರ್ಯವಂಶಿ ದಾಖಲೆಯ ಶತಕ..!

film festival bengaluru (3)

ಶಂಕರ್ ಸಿಂಗ್ ಅವರ ಪುತ್ರ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರ ಇಡೀ ಕುಟುಂಬ ಸಿನಿಮಾ ಕುಟುಂಬ. ಹಿಂದಿ, ತೆಲುಗು, ಕನ್ನಡ ಮತ್ತು ತುಳು ಭಾಷೆಯ ಸಿನಿಮಾಗಳನ್ನು ನಿರ್ದೇಶಿಸಿ ಉತ್ತರ-ದಕ್ಷಿಣ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದಾರೆ. ಹೀಗಾಗಿ ಈ ಐದೂ ಮಂದಿಯ ಅರ್ಧ ಶತಮಾನದ ಕೊಡುಗೆಗಳು ಕನ್ನಡ ಸಿನಿಮಾದ ಮುಂದಿನ ಒಂದು ಶತಮಾನಕ್ಕೆ ಮಾರ್ಗದರ್ಶಿ ಆಗಲಿ ಎಂದು ಆಶಿಸುತ್ತೇನೆ ಎಂದರು.

ಸಿದ್ದರಾಮಯ್ಯ ಅವರು ಸಿಎಂ ಆಗಿರುವವರೆಗೆ ಸಬ್ಸಿಡಿಗೆ ನಿಲ್ಲಲ್ಲ 

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ.ಜಯಮಲಾ ಅವರು ಮುಂದಿಟ್ಟ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಇರುವವರೆಗೆ ಸಬ್ಸಿಡಿ ನಿಲ್ಲುವುದಿಲ್ಲ ಎಂದು ಖಚಿತವಾಗಿ ನುಡಿದರು. ವಾಣಿಜ್ಯ ಮಂಡಳಿ ಮುಂದಿಟ್ಟಿರುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ‌ ಭರವಸೆ ನೀಡಿದರು. ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸಿಂಗ್ ಬಾಬು, ಪೂರ್ಣಿಮಾ ವಿನಯ್ ರಾಜ್ ಕುಮಾರ್, ಜಯಮಾಲಾ, ಚಲನಚಿತ್ರ ಅಕಾಡೆಮಿ‌ ಅಧ್ಯಕ್ಷರಾದ ಸಾಧು ಕೋಕಿಲಾ, ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್ ಅವರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕೋಟಿ ಬೆಲೆ ಬಾಳುವ ಚಿನ್ನ, ವಜ್ರ ಮಾಯ..! ಆಗಿದ್ದೇನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bangalore film festival KV Prabhakar
Advertisment