/newsfirstlive-kannada/media/media_files/2025/08/14/darshan-and-vijayalaxmi-2025-08-14-15-02-48.jpg)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾತನಾಡಿದ್ದ ನಟಿ ರಮ್ಯಾಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ಗಳು ಬಂದಿದ್ದವು. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀಯನ್ನು ನಿಂದಿಸಿ ಕೆಟ್ಟದಾಗಿ ಪೋಸ್ಟ್ಗಳನ್ನ ಮಾಡಲಾಗಿದೆ.
ಈ ಸಂಬಂಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಠಾಣೆಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ದೂರು ದಾಖಲಿಸಿಕೊಂಡು ಕಾರ್ಯಾಚರಣೆಗೆ ಇಳಿದಿದೆ.
ಇದನ್ನೂ ಓದಿ:ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು.. ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಹೇಳಿದ್ದೇನು..?
ಅಶ್ಲೀಲ ಕಾಮೆಂಟ್ ಮಾಡಿದ ಖಾತೆಗಳ ವಿರುದ್ಧ ಪಿಎಸ್ಐ ಲೋಕೇಶ್ ದೂರು ನೀಡಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಟ್ವಿಟರ್ನಲ್ಲಿ ಅಸಭ್ಯ ಪದ ಬಳಕೆ ನಿಂದನೆ ಮಾಡಲಾಗಿದೆ. ಇದನ್ನು ಗಮನಿಸಿರುವ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಸೋಶಿಯಲ್ ಮೀಡಿಯಾದ ಮೂರು, ನಾಲ್ಕು ಖಾತೆಗಳ ದೂರು ದಾಖಲಿಸಿಕೊಂಡಿದ್ದಾರೆ.
ಬಿಎನ್ಎಸ್ ಸೆಕ್ಷನ್ 75, 79, ಹಾಗೂ ಐಟಿ ಆ್ಯಕ್ಟ್ 67, 66 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಸಭ್ಯ ಪದಗಳಿಂದ ನಿಂದನೆ ಸಂಬಂಧ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ. ದೂರಿನ ಅನ್ವಯ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ.
ಇದನ್ನೂ ಓದಿ: ವಿಷ್ಣುವರ್ಧನ್ ಸಮಾಧಿ ಸ್ಥಳ ಇರೋ ಅಭಿಮಾನ್ ಸ್ಟುಡಿಯೋ ಪೂರ್ತಿ ಜಾಗ ಮುಟ್ಟುಗೋಲು ಹಾಕಿಕೊಂಡ ರಾಜ್ಯ ಸರ್ಕಾರ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ