/newsfirstlive-kannada/media/post_attachments/wp-content/uploads/2024/10/DARSHAN_BAIL_1.jpg)
ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸಲ್ಲಿಕೆಯಾದ ಅರ್ಜಿ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ದರ್ಶನ್ ಹಾಗೂ ಲಕ್ಷ್ಮಣ್, ಜಗದೀಶ್, ನಾಗರಾಜ್, ಪ್ರದೂಷ್ ಸೇರಿ ಈ ಪ್ರಕರಣದ ಕೆಲ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರೆ ಆರೋಪಿಗಳನ್ನ ಬೇರೆ ಜೈಲಿಗೆ ಹಾಕುವುದರ ಕುರಿತು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಕೇಸ್; ಚಿನ್ನಯ್ಯಗೆ 1 ವರ್ಷದಿಂದ ಗುಂಡಿ ತೋರಿಸುವುದು ಹೇಳಿಕೊಟ್ಟಿದ್ರಾ..?
ಈ ಅರ್ಜಿಯನ್ನು 64ನೇ ಸೆಷನ್ಸ್ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ. ಆದರೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಬೇರೆ ಜೈಲಿಗೆ ಕಳುಹಿಸಬಾರದು ಎಂದು ಅರ್ಜಿ ಸಲ್ಲಿಕೆ ಮಾಡಲಾಗಿದೆ. ದರ್ಶನ್ ಪರ ವಕೀಲರು ಕೋರ್ಟ್ಗೆ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ಇಂದು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆ ಕೋರ್ಟ್ನಲ್ಲಿ ನಡೆಯಲಿದೆ.
ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆ ಜೊತೆಗೆ ಜೈಲಿನಲ್ಲಿ ಕನಿಷ್ಠ ಸವಲತ್ತು ಕೋರಿ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೈಲಿನಲ್ಲಿ ಮ್ಯಾನ್ಯುಯಲ್ ಪ್ರಕಾರ ಎರಡು ದಿಂಬು, ಎರಡು ಬೆಡ್ ಶೀಟ್, ದಟ್ಟ ಹಾಗೂ ಹೆಚ್ಚುವರಿ ಬಟ್ಟೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆಯೂ ವಿಚಾರಣೆ ನಡೆಸಿ ನ್ಯಾಯಾಲಯ ಆದೇಶ ಪ್ರಕಟ ಮಾಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ