/newsfirstlive-kannada/media/media_files/2025/08/30/kiccha-sudeep-2025-08-30-18-35-32.jpg)
ಕಿಚ್ಚ ಸುದೀಪ್
ಇವತ್ತು (ಆಗಸ್ಟ್ 30) ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಹುಟ್ಟಿದ ದಿನ. ಅಮ್ಮನ ಹುಟ್ಟುಹಬ್ಬದ ದಿನ ಸುದೀಪ್ ಹಸಿರು ಕ್ರಾಂತಿಗೆ ಮುಂದಾಗಿದ್ದಾರೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪಾರ್ಕ್ನಲ್ಲಿ ಗಿಡ ನೆಡುವ ಮೂಲಕ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದಾರೆ. ಇದೇ ರೀತಿ ಹಲವೆಡೆ ಗಿಡ ನೆಡಲು ಸುದೀಪ್ ಅಂಡ್ ಟೀಂ ಮುಂದಾಗಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಮ್ಮನ ಹುಟ್ಟು ಹಬ್ಬದ ನೆನಪಿಗೆ "ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ" ಎಂಬ ಸಾಲಿನೊಂದಿಗೆ ಹಸಿರು ಕ್ರಾಂತಿ.
"ಪ್ರತಿ ಮರಕ್ಕೂ ಒಂದು ಕಥೆ ಇದೆ. ಈ ಮರವು ನನ್ನ ಅಮ್ಮನ ಕಥೆ ಹೇಳಲಿ" ಎಂಬ ಸಂದೇಶವನ್ನು ಕಿಚ್ಚ ಸುದೀಪ್ ಸಾರಿದ್ದಾರೆ.
ಇದನ್ನೂ ಓದಿ: ‘ನಾಪತ್ತೆಯಾದ ಹೆಣ್ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗ್ಬೇಕು’.. ಧರ್ಮಸ್ಥಳ ಕೇಸ್ ಬಗ್ಗೆ ಗಲ್ರಾನಿ ಏನಂದ್ರು?
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಸುದೀಪ್ ಅವರ ತಾಯಿ ಸರೋಜಾ ನಿಧನ ಹೊಂದಿದರು. ಅಮ್ಮ ಅಗಲಿಕೆಗೆ ವರ್ಷವಾಗುತ್ತಾ ಬಂದಿದೆ. ಈಗ ಸುದೀಪ್ ಅವರು ತಾಯಿಯವರ ನೆನಪಿಗಾಗಿ ಸಾಮಾಜಿಕ ಕಾರ್ಯವೊಂದಕ್ಕೆ ಕೈ ಹಾಕಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ನ ವತಿಯಿಂದ ಸುದೀಪ್ ತಾಯಿಯ ನೆನಪಿಗಾಗಿ ಗಿಡಗಳನ್ನು ನೆಡಲಾಗುತ್ತಿದೆ. ಅಂತೆಯೇ ಇವತ್ತು ಸುದೀಪ್ ಹಾಗೂ ಅವರ ಕುಟುಂಬದವರು ಸೇರಿಕೊಂಡು ತೆಂಗಿನ ಗಿಡವೊಂದನ್ನು ನೆಟ್ಟಿದ್ದಾರೆ.
ಅಭಿಮಾನಿಗಳಿಗೆ ವಿಶೇಷ ಮನವಿ
ಇನ್ನು, ಸೆಪ್ಟೆಂಬರ್ 02 ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟು ಹಬ್ಬ. ಪ್ರತಿ ವರ್ಷದಂತೆ ಈ ವರ್ಷಗಳು ಅಭಿಮಾನಿಗಳು ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸೋದಕ್ಕೆ ತಯಾರಿ ನಡೆಸುತ್ತಿದ್ದಾರೆ. ಆದ್ರೆ ಇದರ ಮಧ್ಯೆ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ಇದನ್ನೂ ಓದಿ: ಶಿವಣ್ಣ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
ಕಳೆದ ವರ್ಷ ಕಿಚ್ಚ ಸುದೀಪ್ ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಅಭಿಮಾನಿಗಳಿಗಾಗಿಯೇ ಬರ್ತ್ ಡೇ ಕೇಕ್ ಕಟಿಂಗ್ ಹಮ್ಮಿಕೊಂಡಿದ್ದರು. ಹಾಗಾಗಿ ನಾನಾ ಜಿಲ್ಲೆಯಿಂದ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಬೆಳಗ್ಗೆ 10 ಗಂಟೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಈ ಬಾರಿಯ ಹುಟ್ಟು ಹಬ್ಬಕ್ಕೆ ಮನೆಯ ಬಳಿ ಬರಬೇಡಿ, ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ ಎಂದಿದ್ದಾರೆ. ಅಮ್ಮನ ಅಗಲಿಕೆಯ ನೋವಿನಿಂದ ಕಿಚ್ಚ ಸುದೀಪ್ ಈಗಲೂ ಹೊರ ಬಂದಿಲ್ಲ. ಹೀಗಾಗಿ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ‘ಅಮ್ಮನಿಲ್ಲದ ಮೊದಲ ವರ್ಷವಿದು..’ ಅಭಿಮಾನಿಗಳಿಗೆ ಕಿಚ್ಚ ಭಾವುಕ ಮನವಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ