/newsfirstlive-kannada/media/media_files/2025/12/31/darshan-wife-vijaylaxmi-complaiant-ignored-2025-12-31-13-30-45.jpg)
ತಮ್ಮ ದೂರು ಪೊಲೀಸರಿಂದ ನಿರ್ಲಕ್ಷ್ಯ ಎಂದ ವಿಜಯಲಕ್ಷ್ಮಿ
ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಸಿಸಿಬಿಗೆ ದೂರು ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಈಗ ಪೊಲೀಸರ ತನಿಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಾನು ಸಲ್ಲಿಸಿದ ದೂರು ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ಬೇರೆ ಮಹಿಳೆ ನೀಡಿದ ದೂರು ಅನ್ನು ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ. ಇದು ನಿಜವಾಗಿಯೂ ನನಗೆ ಆಶ್ಚರ್ಯವನ್ನುಂಟುಮಾಡಿದೆ
ನನ್ನ ದೂರು ಮುಖ್ಯವಲ್ಲವೇ?. ನನ್ನ ವಕೀಲರಿಂದ ನಿರಂತರ ಫಾಲೋ-ಅಪ್‌ಗಳ ನಂತರವೂ ಯಾವುದೇ ಕ್ರಮವಿಲ್ಲ. ಇಂದು ನಾನು ವೈಯಕ್ತಿಕವಾಗಿ ಹೋಗಿ ಅವರಿಗೆ ನೆನಪಿಸಬೇಕಾಯಿತು.
ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವ ಈ ವಿಳಂಬಕ್ಕೆ ಕಾರಣ ಆಗಿರದಿರಲಿ. ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಅನ್ನು ವಿಜಯಲಕ್ಷ್ಮಿ ಮಾಡಿದ್ದಾರೆ. ಈ ಮೂಲಕ ಪೊಲೀಸರ ತನಿಖೆ, ತಮ್ಮ ದೂರು ಅನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಅಸಮಾಧಾನವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ.
/filters:format(webp)/newsfirstlive-kannada/media/media_files/2025/12/22/darshan-wife-vijaylaxmi-2025-12-22-12-47-18.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us