/newsfirstlive-kannada/media/post_attachments/wp-content/uploads/2024/12/Allu-Arjun-Jail.jpg)
ಥಿಯೇಟರ್ ಕಾಲ್ತುಳಿತ ಕೇಸ್ ನಲ್ಲಿ ಅಲ್ಲು ಅರ್ಜುನ್ ಆರೋಪಿ
2024ರ ಡಿಸೆಂಬರ್ ನಲ್ಲಿ ಹೈದರಾಬಾದ್‌ನಲ್ಲಿ ಪುಷ್ಪಾ 2 ಸಿನಿಮಾ ಪ್ರದರ್ಶನದ ಥಿಯೇಟರ್ ಹೊರಗೆ ನಡೆದ ಕಾಲ್ತುಳಿತ ಕೇಸ್ ನಲ್ಲಿ ಪೊಲೀಸರು ಕೋರ್ಟ್ ಗೆ ಚಾರ್ಜ್ ಷೀಟ್ ಸಲ್ಲಿಸಿದ್ದಾರೆ. ಪುಷ್ಪಾ 2 ಸಿನಿಮಾದ ಹೀರೋ ಹಾಗೂ ನಟ ಅಲ್ಲು ಅರ್ಜುನ್ ಅವರನ್ನು ಕಾಲ್ತುಳಿತ ಕೇಸ್ ನಲ್ಲಿ 11ನೇ ಆರೋಪಿಯನ್ನಾಗಿ ಮಾಡಿದ್ದಾರೆ. ಒಟ್ಟಾರೆ 23 ಮಂದಿ ವಿರುದ್ಧ ಪೊಲೀಸರು ಚಾರ್ಜ್ ಷೀಟ್ ಸಲ್ಲಿಸಿದ್ದಾರೆ. ನಟ ಅಲ್ಲು ಅರ್ಜುನ್ ಅವರ ಭದ್ರತಾ ತಂಡವು ಈ ಕೇಸ್ ನಲ್ಲಿ ಆರೋಪಿಯಾಗಿದೆ. ಥಿಯೇಟರ್ ಮ್ಯಾನೇಜ್ ಮೆಂಟ್ ಅನ್ನು ಪ್ರಕರಣದ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.
/filters:format(webp)/newsfirstlive-kannada/media/post_attachments/wp-content/uploads/2024/12/ALLU-ARJUN-7.jpg)
ಡಿಸೆಂಬರ್ 4, 2024 ರಂದು ಪುಷ್ಪ 2 ಚಿತ್ರ ತೆರೆಕಂಡ ಸಮಯದಲ್ಲಿ ಹೈದರಾಬಾದ್ ಆರ್‌ಟಿಸಿ ಥಿಯೇಟರ್‌ನ ಪ್ರೀಮಿಯರ್ ಸ್ಕ್ರೀನಿಂಗ್​ನಲ್ಲಿ ನಟ ಅಲ್ಲು ಅರ್ಜುನ್​ ಅವರನ್ನು ನೋಡಲು ಅಪಾರ ಜನಸಮೂಹ ಸೇರಿತ್ತು. ಈ ವೇಳೆ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆಯ ಸಾವಿಗೆ ಕಾರಣವಾಯಿತು. ಟಾಲಿವುಡ್​ ಸೂಪರ್​ ಸ್ಟಾರ್​ ಅಲ್ಲು ಅರ್ಜುನ್​ ಅವರ 'ಪುಷ್ಪ 2 : ದಿ ರೂಲ್' ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದ ಪ್ರಕರಣವಾಗಿ ದೋಷಾರೋಪ ಪಟ್ಟಿಯಲ್ಲಿ ನಟ ಅಲ್ಲು ಅರ್ಜುನ್ ಸೇರಿದಂತೆ ಇತರೆ 23 ಜನರನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ.ಆ ಘಟನೆಯಲ್ಲಿ ನಡೆದ ದುರಂತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಆಕೆಯ ಮಗ ಹಾಸಿಗೆ ಹಿಡಿದು ಒಂದು ವರ್ಷ ಕಳೆದಿದೆ. ಇದೀಗ ನಾಂಪಲ್ಲಿ 9ನೇ ACJM ಕೋರ್ಟ್​​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ.
ಡಿಸೆಂಬರ್ 4, 2024 ರಂದು, ಹೈದರಾಬಾದ್‌ನ ಆರ್‌ಟಿಸಿ ಎಕ್ಸ್ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ, ಪ್ರೀಮಿಯರ್ ಶೋ ಪುಷ್ಪ 2 ಸಮಯದಲ್ಲಿ ಅಲ್ಲು ಅರ್ಜುನ್ ಅವರನ್ನು ನೋಡಲು ಸೇರಿದ ಜನಸಮೂಹದಿಂದಾಗಿ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ರೇವತಿ ಸಾವನ್ನಪ್ಪಿದ್ದು, ಅವರ ಅಪ್ರಾಪ್ತ ಮಗ ಶ್ರೀತೇಜ್​ಗೆ ಆಮ್ಲಜನಕದ ಕೊರತೆ ಉಂಟಾದ ಕಾರಣ ಹಾಸಿಗೆ ಹಿಡಿಯುವಂತಾಯಿತು. ಈ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದು, ಸುರಕ್ಷತಾ ಕ್ರಮಗಳನ್ನು ನೇರವೇರಿಸುವಲ್ಲಿ ವಿಫಲವಾಗಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.
ಸಂಧ್ಯಾ ಥೀಯೆಟರ್​ಗೆ ಭೇಟಿ ಕೊಡುತ್ತಾರೆಂದು ತಿಳಿದರೂ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಆರೋಪದ ಮೇಲೆ ಅದರ ಆಡಳಿತ ಮಂಡಳಿ ಮತ್ತು ಮಾಲೀಕರ ಹೆಸರನ್ನೂ ಆರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಅಲ್ಲದೇ ಜನಜಂಗುಳಿ ಹೆಚ್ಚಿದ್ದರೂ ಅದನ್ನು ಲೆಕ್ಕಿಸದೆ ಮಂದುವರೆದಿದ್ದಕ್ಕಾಗಿ ಅಲ್ಲು ಅರ್ಜುನ್​ ಹೆಸರನ್ನ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಒಟ್ಟಾರೆಯಾಗಿ 24 ವ್ಯಕ್ತಿಗಳ ಪಟ್ಟಿಯಲ್ಲಿ ಅಲ್ಲು ಅರ್ಜುನ್ ಅವರ ವೈಯಕ್ತಿಕ ಮ್ಯಾನೇಜರ್, ಸಿಬ್ಬಂದಿ ಸದಸ್ಯರು ಮತ್ತು ಎಂಟು ಖಾಸಗಿ ಬೌನ್ಸರ್‌ಗಳು ಸೇರಿದ್ದಾರೆ. ಅವರ ಬೇಜವಾಬ್ದಾರಿತನದ ನಡೆಯಿಂದಾಗಿ ಸಮಸ್ಯೆ ಉಲ್ಬಣಿಸಿದವು ಎಂದು ತೀರ್ಮಾನಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us