/newsfirstlive-kannada/media/media_files/2025/08/30/darshna-2025-08-30-10-39-16.jpg)
ಬೆಂಗಳೂರು: ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರೋ ದರ್ಶನ್ ಇಂದು ಬಳ್ಳಾರಿ ಕಾರಾಗೃಹಕ್ಕೆ ಶಿಫ್ಟ್​ ಆಗ್ತಾರಾ ಅನ್ನೋ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇಂದು ದರ್ಶನ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರದ ಬಗ್ಗೆ ಆದೇಶ ನೀಡುವ ಸಾಧ್ಯತೆ ಇದೆ.
/filters:format(webp)/newsfirstlive-kannada/media/media_files/2025/08/18/darshan-in-jail-2025-08-18-07-07-27.jpg)
64ನೇ ಸಿಟಿ ಸಿವಿಲ್ ಕೋರ್ಟ್​ನಲ್ಲಿ ದರ್ಶನ್, ಜಗದೀಶ್, ಲಕ್ಷ್ಮಣ್, ನಾಗರಾಜ್, ಪ್ರದೋಶ್ ಜೈಲು ಸ್ಥಳಾಂತರ ಕುರಿತು ಆದೇಶ ಹೊರ ಬಿಳಲಿದೆ. ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಆರೋಪಿಗಳು ಕೂಡ ಕೋಟ್​ರ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ಸಂಬಂಧ ವಿಚಾರಣೆ ನಡೆಸಿ ಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.
/filters:format(webp)/newsfirstlive-kannada/media/media_files/2025/08/15/darshan4-2025-08-15-16-32-51.jpg)
‘ದಾಸ’ನ ಬಳ್ಳಾರಿ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ಕಳೆಯುತ್ತಿರೋ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗೋ ಸಾಧ್ಯತೆ ಇದೆ. ಕಳೆದ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ ರೌಡಿಗಳ ಜೊತೆ ಸಂಪರ್ಕ ಬೆಳಸಿ ರಾಜಾತಿಥ್ಯ ಪಡೆದಿದ್ದಕ್ಕೆ ಸಾಕ್ಷಿ ಸಿಕ್ಕಿತ್ತು. ಸ್ಪೆಷಲ್​ ಟ್ರೀಟ್​ಮೆಂಟ್​ ಕೊಡದಂತೆ ಸುಪ್ರೀಂ ಕೋರ್ಟ್​ ಕೂಡ ಖಡಕ್​ ವಾರ್ನಿಂಗ್​ ನೀಡಿದ್ದು, ಈ ಬಾರಿಯೂ ಮತ್ತೆ ಅದೇ ರೀತಿ ಆಗಬಾರದೆಂದು ಅಧಿಕಾರಿಗಳು ಅಲರ್ಟ್​ ಆಗಿದ್ದಾರೆ. ಈ ಹಿಂದೆ ಆದ ತಪ್ಪು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಜೈಲಾಧಿಕಾರಿಗಳಿಗೆ ಸೂಚನೆ ಸಿಕ್ಕಿದೆ. ಇನ್ನೊಂದೆಡೆ ದರ್ಶನ್​ನ ಮತ್ತೆ ಬಳ್ಳಾರಿಗೆ ಶಿಫ್ಟ್​ ಆಗ್ತಾರಾ ಎಂದು ಗೊತ್ತಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us