/newsfirstlive-kannada/media/media_files/2025/10/11/kaun-banega-crorepathi-2025-10-11-18-09-07.jpg)
ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ರಿಷಭ್ ಶೆಟ್ಟಿ ಭಾಗಿ
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಕಾಂತಾರ-1 ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ, ನಿರ್ದೇಶಕ ರಿಷಭ್ ಶೆಟ್ಟಿ ಭಾಗಿಯಾಗಿದ್ದಾರೆ. ಇಂದು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂಭ್ರಮದಂದು ಅಮಿತಾಬ್ ಬಚ್ಚನ್ ಅವರಿಗೆ ಹೊಂಬಾಳೆ ಫಿಲ್ಮ್ಸ್ ಟೀಂ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಕೌನ್ ಬನೇಗಾ ಕರೋಡ್ ಪತಿ ವಿಶೇಷ ಸಂಚಿಕೆಯಲ್ಲಿ ರಿಷಭ್ ಶೆಟ್ಟಿ ಭಾಗಿಯಾಗಿದ್ದಾರೆ. ರಿಷಭ್ ಶೆಟ್ಟಿ ಮತ್ತು ಅಮಿತಾಬ್ ಬಚ್ಚನ್ ನಡುವಿನ ಮಾತುಕತೆ ಕುತೂಹಲಕ್ಕೆ ಕಾರಣವಾಗಿದೆ.
ಕೌನ್ ಬನೇಗಾ ಕರೋಡ್ ಪತಿ ಎಪಿಸೋಡ್ ಗಳಲ್ಲಿ ಆಗ್ಗಾಗ್ಗೆ ಸಾಧಕರನ್ನು ಕರೆಸಿ ಅತಿಥಿಗಳಾಗಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತಿದೆ. ಈಗ ಕಾಂತಾರದ ಬಿಗ್ ಸಕ್ಸಸ್‌ನ ರೂವಾರಿ ನಟ, ನಿರ್ದೇಶಕ ರಿಷಭ್ ಶೆಟ್ಟಿಗೆ ಕೌನ್ ಬನೇಗಾ ಕರೋಡ್ ಪತಿ ಶೋನಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಕಿರುತೆರೆಯನ್ನು ಹಂಚಿಕೊಳ್ಳುವ ಅವಕಾಶ ರಿಷಭ್ ಶೆಟ್ಟಿ ಪಾಲಿಗೆ ಒದಗಿ ಬಂದಿದೆ . ಸೋನಿ ಟಿವಿಯಲ್ಲಿ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಪ್ರಸಾರವಾಗುತ್ತೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.