‘ಟಾಕ್ಸಿಕ್’ ಹುಮಾ ಖುರೇಷಿ ಫಸ್ಟ್​ ಲುಕ್ ಔಟ್! ಹೆಂಗಿದೆ..?

ಗೀತು ಮೋಹನ್​ದಾಸ್ ನಿರ್ದೇಶನದ ಚಿತ್ರ ಟಾಕ್ಸಿಕ್. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ.

author-image
Ganesh Kerekuli
Huma Qureshi
Advertisment

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಇದೀಗ ಚಿತ್ರತಂಡ ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡ್ತಿದೆ. 

ಇತ್ತೀಚೆಗಷ್ಟೇ ಕಿಯಾರ ಅಡ್ವಾಣಿ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಆಗಿತ್ತು.. ಇದೀಗ ಹುಮಾ ಖುರೇಷಿ (Huma Qureshi) ಲುಕ್ ಬಿಡುಗಡೆ ಮಾಡಲಾಗಿದೆ. ಸದ್ಯ ಹುಮಾ ಖುರೇಷಿ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಎಲಿಜಬೆತ್ ಎಂಬ ಪಾತ್ರ ಮಾಡುತ್ತಿದ್ದಾರೆ. 

ಇದನ್ನೂ ಓದಿ: ಆವತ್ತು ಎಣ್ಣೆ ಕಥೆ ಹೆಣೆದ ಗಿಲ್ಲಿ, ಇವತ್ತು ಬಿಗ್​ಬಾಸ್​ ಹುಲಿ.. ಮಾತುಗಾರನ ಜರ್ನಿ ಹೇಗಿದೆ..?

ಇನ್ನೂ ಇದೇ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು,  ಸಿನಿಮಾದ ಶೂಟಿಂಗ್ ಅನುಭವ ಬಿಚ್ಚಿಟ್ಟಿದ್ದಾರೆ‌‌. ಟಾಕ್ಸಿಕ್ ಚಿತ್ರತಂಡದ ವರ್ಕಿಂಗ್ ಸ್ಟೈಲ್ ತುಂಬಾ ಭಿನ್ನವಾಗಿದೆ. ಯಶ್ ಮತ್ತು ಗೀತು ಇಬ್ಬರೂ ಸಿನಿಮಾವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ. ಸಿನಿಮಾದ ಕಥೆ, ಚಿತ್ರೀಕರಣ ರೀತಿ ಎಲ್ಲವೂ ದೊಡ್ಡ ಅನುಭವ ನೀಡುತ್ತಿವೆ ಅಂತಾ ತಿಳಿಸಿದ್ದಾರೆ.

ಗೀತು ಮೋಹನ್​ದಾಸ್ ನಿರ್ದೇಶನದ ಚಿತ್ರ ಇದಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ.

ಇದನ್ನೂ ಓದಿ: ಸೆಟ್​ಬಾಯ್​ ಕೆಲ್ಸದಿಂದ, ಕಲಾ ಪ್ರಪಂಚಕ್ಕೆ ಗಿಲ್ಲಿ ಎಂಟ್ರಿ ಆಗಿದ್ದೇಗೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Huma Qureshi Rocking Star Yash Yash Toxic movie Toxic: A Fairy Tale for Grown-Ups
Advertisment