ಸಿದ್ದರಾಮಯ್ಯರ ಭೇಟಿಯಾದ ಶೃತಿ, ಜಯಮಾಲಾ, ಮಾಳವಿಕಾ! ಯಾಕೆ ಗೊತ್ತಾ..?

ಸಿಎಂ ಸಿದ್ದರಾಮಯ್ಯರನ್ನು ಹಿರಿಯ ನಟಿಯರಾದ ಜಯಮಾಲಾ, ಮಾಳವಿಕಾ ಅವಿನಾಶ್‌ ಮತ್ತು ಶೃತಿ ಭೇಟಿ ಯಾಗಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕೆಂದು ಮನವಿ ಮಾಡಿದ್ದಾರೆ.

author-image
Ganesh Kerekuli
Siddaramaiah (16)
Advertisment

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ಹಿರಿಯ ನಟಿಯರಾದ ಜಯಮಾಲಾ, ಮಾಳವಿಕಾ ಅವಿನಾಶ್‌ ಮತ್ತು ಶೃತಿ ಭೇಟಿ ಯಾಗಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕೆಂದು ಮನವಿ ಮಾಡಿದ್ದಾರೆ. 

ಸಿಎಂ ಭೇಟಿ ಬಳಿಕ ಮಾತನಾಡಿರುವ ಜಯಮಾಲಾ, ವಿಷ್ಣುವರ್ಧನ್​ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಮನವಿ ಮಾಡಿದ್ದೇವೆ. ಸರೋಜಾದೇವಿ ಅವರಿಗೂ ಕರ್ನಾಟಕ ರತ್ನ ಕೊಡಬೇಕೆಂದು ವಿನಂತಿ ಮಾಡಿದ್ದೇವೆ. ಸರೋಜಾದೇವಿ ಅವರ ಹೆಸರನ್ನ ರಸ್ತೆಗೂ ಇಡಬೇಕೆಂದು ವಿನಂತಿಸಿದ್ದೇವೆ. ಸಿಎಂ ಕ್ಯಾಬಿನೆಟ್​ನಲ್ಲಿ ಚರ್ಚೆ ಆಗಬೇಕು ಎಂದಿದ್ದಾರೆ ಎಂದರು. 

ಇದನ್ನೂ ಓದಿ:ಬಿಗ್​ಬಾಸ್​ ಪ್ರೋಮೋ ರಿಲೀಸ್​.. ಕಿಚ್ಚನ ಎಂಟ್ರಿ ಸೂಪರ್​, ಹೇಳಿದ್ದೇನು? VIDEO

ನಟಿ ಮಾಳವಿಕಾ ಅವಿನಾಶ್ ಮಾತನಾಡಿ.. ಡಾ.ವಿಷ್ಣುವರ್ಧನ್ ಅವರಿಗೆ 75ನೇ ವರ್ಷದ ಸಂದರ್ಭ. ಹೀಗಾಗಿ ಸಿಎಂ ಭೇಟಿ ಮಾಡಿ ಕರ್ನಾಟಕ ರತ್ನಕ್ಕೆ ಮನವಿ ಮಾಡಿದ್ದೇವೆ. ಸಾಧ್ಯವಾದರೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡ್ತೇನೆ ಎಂದಿದ್ದಾರೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅದೇ ರೀತಿ ಬಹುಭಾಷಾ ತಾರೆ ಸರೋಜಾ ದೇವಿಯವರಿಗೂ ಕರ್ನಾಟಕ ರತ್ನ ನೀಡ ಬೇಕೆಂದು ಮನವಿ ಮಾಡಿದ್ದೇವೆ ಎಂದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Vishnuvardhan CM SIDDARAMAIAH
Advertisment