/newsfirstlive-kannada/media/post_attachments/wp-content/uploads/2025/07/RAMYA_DARSHAN.jpg)
ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಅವರು ಕಾನೂನಿನ ಮುಂದೆ ಎಲ್ಲರು ಸಮಾನರು, ನ್ಯಾಯಾಲಯದ ವ್ಯವಸ್ಥೆಯಲ್ಲಿ ನಂಬಿಕೆ ಇಡಿ ಎಂದು ಹೇಳಿದ್ದಾರೆ.
ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಅವರು ತಕ್ಷಣದಿಂದಲೇ ಬಂಧಿಸಿ ಜೈಲಿಗೆ ಹಾಕಬೇಕು ಎಂದು ಸುಪ್ರೀಂಕೋರ್ಟ್ ತೀರ್ಪುನಲ್ಲಿ ಹೇಳಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಅವರ ಪೀಠ ಮಹತ್ವದ ಆದೇಶ ಹೊರಡಿಸಿದೆ. ದರ್ಶನ್, ಪವಿತ್ರಾ ಗೌಡ ಅವರನ್ನು ತಕ್ಷಣದಿಂದಲೇ ಜೈಲಿಗೆ ಹಾಕಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
ಇದನ್ನೂ ಓದಿ:ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದು.. ಸುಪ್ರೀಂ ಕೋರ್ಟ್ ಆದೇಶದಂತೆ ಕೂಡಲೇ ಬಂಧಿಸಲು ಕ್ರಮ
ಈ ಬಗ್ಗೆ ತಮ್ಮ ಇನ್ಸ್ಟಾ ಪೋಸ್ಟ್ ಮಾಡಿರುವ ರಮ್ಯಾ ಅವರು, ಸುಪ್ರೀಂ ಕೋರ್ಟ್ನ ತೀರ್ಪು ಇಂದು ಬಲವಾದ ಸಂದೇಶ ರವಾನೆ ಮಾಡಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ನ್ಯಾಯಾಲಯದಲ್ಲಿ ಎಲ್ಲರೂ ನಂಬಿಕೆ ಇಡಿ. ಕಾನೂನು ಅನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ