ಅಜ್ಞಾತ ಸ್ಥಳದಲ್ಲಿ ದರ್ಶನ್​.. ಸುಪ್ರೀಂ ಕೋರ್ಟ್​ ತೀರ್ಪು ಬೆನ್ನಲ್ಲೇ ನಟ ಹೋಗಿದ್ದು ಎಲ್ಲಿಗೆ?

ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಆದರೆ ದರ್ಶನ್ ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಂತೆ.

author-image
Bhimappa
DARSHAN (4)
Advertisment

ಬೆಂಗಳೂರು: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಆದರೆ ದರ್ಶನ್ ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಂತೆ. 

ನಟ ದರ್ಶನ್​ ನಿನ್ನೆ ರಾತ್ರಿವರೆಗೂ ಪತ್ನಿ ವಿಜಯಲಕ್ಷ್ಮಿ ಅವರ ಜೊತೆ ಬೆಂಗಳೂರಿನಲ್ಲೇ ಇದ್ದರು. ಆದರೆ ನಂತರ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿಯೇ ದರ್ಶನ್​ ಬೆಂಗಳೂರು ಬಿಟ್ಟು ಹೊರಗೆ ಹೋಗಿದ್ದಾರೆ ಅನ್ನೋ ಮಾಹಿತಿ ಇದೆ. ದರ್ಶನ್ ಅವರ ಆಪ್ತ ಬಳಗದಿಂದ ಈ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ:ನಟ ದರ್ಶನ್​, ಪವಿತ್ರಾ ಗೌಡ ಮತ್ತೆ ಜೈಲಿಗೆ.. ನಟಿ ರಮ್ಯಾ ಇನ್​​ಸ್ಟಾದಲ್ಲಿ ಹೇಳಿದ್ದು ಏನು?

ದರ್ಶನ್​​ಗೆ ಗುರುವಾರದ ತನಕ ರಿಲೀಫ್; ಸುಪ್ರೀಂ ಕೋರ್ಟ್​ನ ಇವತ್ತಿನ ವಿಚಾರಣೆಯಲ್ಲಿ ಏನಾಯ್ತು..?

ಸುಪ್ರೀಂ ಕೋರ್ಟ್​ ತೀರ್ಪು ಹಿನ್ನೆಲೆಯಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಮನೆಯಲ್ಲಿ ಇದ್ದಾರೆ. ನಗರದ ಹೊಸಕೆರೆಹಳ್ಳಿಯಲ್ಲಿ ಇರುವ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್​​ಮೆಂಟ್​ನಲ್ಲಿ ವಿಜಯಲಕ್ಷ್ಮಿ ಅವರು ಇದ್ದಾರೆ. ಸುಪ್ರಿಂ ಕೋರ್ಟ್ ತೀರ್ಪು ಇರುವುದರಿಂದ ಬೆಳಗ್ಗೆಯಿಂದಲೂ ಮನೆಯಿಂದ ಹೊರಬಂದಿಲ್ಲ. ಇದೀಗ ಸುಪ್ರೀಂ ಕೋರ್ಟ್​ ತೀರ್ಪು ಹೊರ ಬಿದ್ದಿದ್ದರಿಂದ ವಿಜಯಲಕ್ಷ್ಮಿಗೆ ಟೆನ್ಷನ್ ಶುರುವಾಗಿದೆ. 

ಹೈಕೋರ್ಟ್​ ಜಾಮೀನು ನೀಡಿರುವುದನ್ನು ಪ್ರಶ್ನೆ ಮಾಡಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್​ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪು ಪ್ರಕಟಿಸಿದ್ದು ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಬೇಲ್ ಅನ್ನು ಸುಪ್ರೀಂ ಕೋರ್ಟ್ ಕ್ಯಾನ್ಸಲ್ ಮಾಡಿದೆ.  

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor Darshan Pavitra Gowda
Advertisment