/newsfirstlive-kannada/media/media_files/2025/08/14/pavitra_gowda-2025-08-14-13-03-15.jpg)
ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜಾಮೀನು ಅನ್ನು ಸುಪ್ರೀಂ ಕೋರ್ಟ್ ಕ್ಯಾನ್ಸಲ್ ಮಾಡಿದೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದ್ದು ಅವರ ಮೇಲೆ ಎಸಿಪಿ ಭರತ್ ರೆಡ್ಡಿ ನೇತೃತ್ವದ ತಂಡ ನಿಗಾ ಇಟ್ಟಿದೆ.
ಕೆಲವೇ ಕ್ಷಣಗಳಲ್ಲಿ ಪವಿತ್ರಾ ಗೌಡಳನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡರನ್ನ ವಶಕ್ಕೆ ಪಡೆದು ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಇದಾದ ಮೇಲೆ ಸ್ಥಳೀಯ ಠಾಣೆಗೆ ಪೊಲೀಸರು ಕರೆದುಕೊಂಡು ಹೋಗಲಿದ್ದಾರೆ. ಬಳಿಕ ಸುಪ್ರೀಂ ಕೋರ್ಟ್ ಆದೇಶ ಪಡೆದು ಅದರಂತೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: ಅಜ್ಞಾತ ಸ್ಥಳದಲ್ಲಿ ದರ್ಶನ್.. ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ನಟ ಹೋಗಿದ್ದು ಎಲ್ಲಿಗೆ?
ಸದ್ಯ ಪವಿತ್ರಾ ಗೌಡ ಅವರು ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗಿ ಮತ್ತೆ ಆರ್.ಆರ್ ನಗರ ಮನೆಗೆ ವಾಪಸ್ ಆಗಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಎಸಿಪಿ ಭರತ್ ರೆಡ್ಡಿ ನೇತೃತ್ವದ ತಂಡ ಪವಿತ್ರಾ ಗೌಡ ಮೇಲೆ ನಿಗಾ ವಹಿಸಿದೆ. ಯಾವುದೇ ರೀತಿಯಿಂದಲೂ ತಪ್ಪಿಸಿಕೊಳ್ಳದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಎಸಿಪಿ ಭರತ್ ರೆಡ್ಡಿ, ಅವರ ನಿವಾಸದ ಬಳಿ ಆಗಮಿಸುವ ಸಾಧ್ಯತೆ ಇದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಪರ ವಕೀಲರು ಸುಪ್ರೀಂಕೋರ್ಟ್ಗೆ ಹೋಗಿದ್ದರು. ಈ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್, ತೀರ್ಪು ಅನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಆದೇಶ ಹೊರಡಿಸಿದ್ದು ಪ್ರಕರಣದ ಎಲ್ಲ ಆರೋಪಿಗಳ ಬೇಲ್ ಅನ್ನು ರದ್ದು ಮಾಡಿ ತೀರ್ಪು ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ