/newsfirstlive-kannada/media/media_files/2026/02/20/toxic-yash-2026-02-20-09-39-23.jpg)
ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಕೊಂಚ ಬೇಸರದ ಸುದ್ದಿಯೊಂದನ್ನ ನೀಡಿದೆ. ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದ್ದು, ರಿಲೀಸ್ ಡೇಟ್ ಕುರಿತು ಸ್ವತಃ ನಟ ಯಶ್ ಅಧಿಕೃತವಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಸಲಿಗೆ ಗೀತು ಮೋಹನ್​ದಾಸ್ ನಿರ್ದೇಶನದ, ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಬೃಹತ್ ಬಜೆಟ್‌ನ ಸಿನಿಮಾ ಇದೇ ಮಾರ್ಚ್ 19 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ ತೆರೆಕಾಣಬೇಕಿತ್ತು. ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಚಿತ್ರತಂಡ ಬಿಡುಗಡೆಯನ್ನು ಮುಂದೂಡಿದೆ. ಇದಕ್ಕೆ ಪ್ರಮುಖ ಕಾರಣ ಪ್ರಸ್ತುತ ನಡೆಯುತ್ತಿರುವ ‘ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ’.
ಇಸ್ರೇಲ್-ಇರಾನ್ ಯುದ್ಧದ (Israel-Iran War) ಪರಿಣಾಮ ಜಾಗತಿಕ ಮಾರುಕಟ್ಟೆಯ ಮೇಲೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ.
ಇದನ್ನೂ ಓದಿ: ನಾಡಿದ್ದಿನಿಂದ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಡಾಂಬರೀಕರಣ: 15 ದಿನಗಳ ಕಾಲ ಟ್ರಾಫಿಕ್ ಜಾಮ್ ಸಾಧ್ಯತೆ
‘ಟಾಕ್ಸಿಕ್’ ಕೇವಲ ಪ್ಯಾನ್ ಇಂಡಿಯಾ ಮಾತ್ರವಲ್ಲದೆ, ಪ್ಯಾನ್ ವರ್ಲ್ಡ್ (Pan-World) ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರ. ಓವರ್‌ಸೀಸ್ ಮಾರುಕಟ್ಟೆ ಹಾಗೂ ಜಾಗತಿಕ ವಿತರಣೆಯ (Global Distribution) ದೃಷ್ಟಿಯಿಂದ ಪ್ರಸ್ತುತ ಯುದ್ಧದ ವಾತಾವರಣ ಸಿನಿಮಾದ ಕಲೆಕ್ಷನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ರಿಸ್ಕ್ ತೆಗೆದುಕೊಳ್ಳದ ಚಿತ್ರತಂಡ, ಅನಿವಾರ್ಯವಾಗಿ ರಿಲೀಸ್ ಡೇಟ್ ಅನ್ನು ಬದಲಾಯಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಜೂನ್ 4ಕ್ಕೆ ವಿಶ್ವಾದ್ಯಂತ ರಿಲೀಸ್
ಈ ಬಗ್ಗೆ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡಿರುವ ಯಶ್, ಜಾಗತಿಕ ಮಟ್ಟದ ಬೆಳವಣಿಗೆಗಳ ಕಾರಣದಿಂದಾಗಿ ನಾವು 'ಟಾಕ್ಸಿಕ್' ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ. ಮಾರ್ಚ್ 19ರ ಬದಲಾಗಿ, ಇದೇ ಜೂನ್ 4 ರಂದು ಸಿನಿಮಾ ವಿಶ್ವದಾದ್ಯಂತ ನಿಮ್ಮೆದುರು ಬರಲಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲ ಹೀಗೆಯೇ ಇರಲಿ ಎಂದು ಬರೆದುಕೊಂಡಿದ್ದಾರೆ.
ಒಟ್ಟಿನಲ್ಲಿ ತಮ್ಮ ನೆಚ್ಚಿನ ನಟನ ದರ್ಶನ ಪಡೆಯಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಸು ನಿರಾಸೆ ತರಿಸಿದ್ದರೂ, ಜೂನ್ 4ರಂದು ಚಿತ್ರಮಂದಿರಗಳಲ್ಲಿ ದೊಡ್ಡ ಜಾತ್ರೆಯೇ ನಡೆಯುವುದು ಖಚಿತವಾಗಿದೆ.
ಇದನ್ನೂ ಓದಿ: ಅಮೆರಿಕಾ ದಾಳಿಯಿಂದ ಇರಾನ್ ನಲ್ಲಿ 787 ಮಂದಿ ಸಾವು: ದಿನೇ ದಿನೇ ಸಾವಿನ ಸಂಖ್ಯೆ ಏರಿಕೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us