ಸ್ಯಾಂಡಲ್​ವುಡ್​ನ ಹಿರಿಯ ನಟ ಉಮೇಶ್ ನಿಧನ

ಸ್ಯಾಂಡಲ್​ವುಡ್​ನ ಹಿರಿಯ ನಟ ಉಮೇಶ್ ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 8.35ರ ಸಮಯದಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

author-image
Ganesh Kerekuli
Actor umesh (1)
Advertisment

ಸ್ಯಾಂಡಲ್​ವುಡ್​ನ ಹಿರಿಯ ನಟ ಉಮೇಶ್ (Actor Umesh) ನಿಧನರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 8.35ರ ಸಮಯದಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನಟ ಉಮೇಶ್ ಅವರಿಗೆ 80 ವರ್ಷವಾಗಿತ್ತು. ಸುಮಾರು ಆರು ದಶಕಗಳ ಕಾಲ ಕಲಾ ಸೇವೆಯಲ್ಲಿದ್ದ ಅವರು, 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು. ಮೈಸೂರೂ ಮೂಲದ ಉಮೇಶ್ ಚಿಕ್ಕ ವಯಸ್ಸಿನಲ್ಲೇ ರಂಗ ಭೂಮಿಗೆ ಪ್ರವೇಶ ಮಾಡಿದ್ದರು. 

ಗುಬ್ಬಿ ವೀರಣ್ಣ ನಾಟಕ ಕಂಪೆನಿಯಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದರು. ಉಮೇಶ್ ಅವರಿಗಿದ್ದ ಪ್ರತಿಭೆಯನ್ನು ಗುರುತಿಸಿ ಪುಟ್ಟಣ್ಣ ಕಣಗಾಲ್ ಅವರು​ ಬಿ.ಆರ್‌.ಪಂತಲು ಸಿನಿಮಾಗೆ ಅಪ್ರೋಚ್ ಮಾಡಿದ್ದರು. 1960ರಲ್ಲಿ ‘ಮಕ್ಕಳ ರಾಜ್ಯ’ ಸಿನಿಮಾದಲ್ಲಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. 

ಈ ಸಿನಿಮಾದಲ್ಲಿ ತಮಿಳು ನಟ ಶಿವಾಜಿ ಗಣೇಶನ್ ಅತಿಥಿ ಪಾತ್ರದಲ್ಲಿ ನಟಿಸಿದ್ರು. ನಾಗರಹೊಳೆ, ಗುರು ಶಿಷ್ಯರು, ಕಾಮಮಬಿಲ್ಲು, ಅಪೂರ್ವ ಸಂಗಮ, ಶ್ರುತಿ ಸೇರಿದಾಗ, ಮಲಯ ಮಾರುತ.. ಹೀಗೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ನಟನೆಯ ಹಲವು ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. 

ಇದನ್ನೂ ಓದಿ: ಮದುವೆ ಎಂಗೇಜ್ ಮೆಂಟ್ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಶೋನ ಶಿವು ಮತ್ತು ಮಾನಸ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Actor M.S.Umesh Actor Umesh
Advertisment