Advertisment

ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಶ್ರೇಯಸ್‌ ಪಟೇಲ್ ಬೆಂಬಲಿಗರ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ

author-image
admin
Updated On
ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಶ್ರೇಯಸ್‌ ಪಟೇಲ್ ಬೆಂಬಲಿಗರ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ
Advertisment
  • ಶ್ರೇಯಸ್ ಪಟೇಲ್ ತಾಯಿಯನ್ನು ನೋಡಿದಾಗ ಜೆಡಿಎಸ್‌ ಘೋಷಣೆ
  • ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರಿಂದಲೂ ಶ್ರೇಯಸ್ ಪರ ಜೈಯಘೋಷ
  • ಜೆಡಿಎಸ್‌ ಕಾರ್ಯಕರ್ತರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿರುವ ಆರೋಪ

ಹಾಸನ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಹೊಳೆನರಸೀಪುರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್‌ನ ಇಬ್ಬರು ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

Advertisment

ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ‌.ಪಾಳ್ಯದ ಮತಗಟ್ಟೆ ಸಂಖ್ಯೆ 249ರಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಗೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ತಾಯಿ ಅನುಪಮಾ ಅವರು ಭೇಟಿ ನೀಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ತಾಯಿಯನ್ನು ನೋಡಿದ ಜೆಡಿಎಸ್‌ ಕಾರ್ಯಕರ್ತರು ಜೆಡಿಎಸ್‌ ಪಕ್ಷಕ್ಕೆ ಜೈಕಾರ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದು ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್ ಪಟೇಲ್ ಪರ ಘೋಷಣೆ ಕೂಗಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರು ಘೋಷಣೆ ವಿಕೋಪಕ್ಕೆ ತಿರುಗಿ ಗಲಾಟೆ ನಡೆದಿದೆ.

ಇದನ್ನೂ ಓದಿ:ವೋಟಿಂಗ್ ದಿನವೇ BJP ಸಂಸದ ತೇಜಸ್ವಿ ಸೂರ್ಯಗೆ ಬಿಸಿ ಮುಟ್ಟಿಸಿದ ಚುನಾವಣಾ ಆಯೋಗ; ಆಗಿದ್ದೇನು?

Advertisment

ಕಾಂಗ್ರೆಸ್, ಜೆಡಿಎಸ್‌ ಕಾರ್ಯಕರ್ತರ ಗಲಾಟೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತರಾದ ಮೋಹನ್‌ ಕುಮಾರ್, ಗಿರೀಶ್ ಮೇಲೆ ಹಲ್ಲೆ ನಡೆದ ಆರೋಪವಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜೆಡಿಎಸ್‌‌ನ ಸಾಗರ್ ಹಾಗೂ ಪ್ರದೀಪ್ ವಿರುದ್ಧ ಕಾಂಗ್ರೆಸ್‌ ನಾಯಕರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಮೋಹನ್‌ಕುಮಾರ್ ಸ್ಥಿತಿ ಗಂಭೀರವಾಗಿದೆ. ಖಾಸಗಿ ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ.

publive-image

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಮಧ್ಯೆ ಜಿದ್ದಾಜಿದ್ದಿನ ಫೈಟ್ ನಡೆದಿದೆ. ಸದ್ಯ ಮತದಾನ ಮುಗಿದಿದ್ದು, ಅಭ್ಯರ್ಥಿಯ ರಾಜಕೀಯ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಜೂನ್‌ 4ರಂದು ಹಾಸನದ ಸಂಸತ್ ಸ್ಥಾನ ಯಾರಿಗೆ ಅನ್ನೋದು ನಿರ್ಧಾರವಾಗಲಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment