ಮಂಡ್ಯದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ; ಅನ್ಯಕೋಮಿನ ಯುವಕರಿಂದ ಜಳಪಿಸಿದ ಕತ್ತಿ

author-image
Ganesh Nachikethu
Updated On
ನಾಗಮಂಗಲ ಗಲಭೆ ಕೇಸ್​​; 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
Advertisment
  • ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ
  • ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕೃತ್ಯ!
  • ದರ್ಗಾ ಮುಂದೆ ಮೆರವಣಿಗೆ ಮಾಡದಂತೆ ಪುಂಡರ ಕ್ಯಾತೆ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದೆ. ಹಾಗಾಗಿ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ್ದಾರೆ.

ಏನಿದು ಗಲಭೆ?

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗ್ತಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ದರ್ಗಾ ಬಳಿ ಮೆರವಣಿಗೆ ಮಾಡಬಾರದು ಎಂದು ಗಲಾಟೆ ಮಾಡಿದ್ದಾರೆ. ಜತೆಗೆ ತಮಟೆ, ಡೊಳ್ಳು ಕೂಡ ಬಾರಿಸಬಾರದು ಎಂದು ಕಿರಿಕ್ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದೇ ವೇಳೆ ತಳ್ಳಾಟ ಕೂಡ ಆಗಿದ್ದು, ಅನ್ಯಕೋಮಿನ ಯುವಕರು ಕತ್ತಿ ಜಳಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲು ತೂರಾಟದಿಂದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು.

ಇದನ್ನೂ ಓದಿ:ಯುವತಿಯ ಖಾಸಗಿ ವಿಡಿಯೋ ಇಟ್ಟುಕೊಂಡಿದ್ದ ಸೀರಿಯಲ್​ ನಟ ಕೇಸ್​ಗೆ ಬಿಗ್​ ಟ್ವಿಸ್ಟ್​​; ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment