/newsfirstlive-kannada/media/post_attachments/wp-content/uploads/2023/11/MEERAT_STUDENT.jpg)
ಲಕ್ನೋ: ಉತ್ತರ ಪ್ರದೇಶದ ಮೀರತ್ನಲ್ಲಿ ದುಷ್ಕರ್ಮಿಗಳ ಗುಂಪೊಂದು 12ನೇ ತರಗತಿಯ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 13 ರಂದು ವಿದ್ಯಾರ್ಥಿ ಸಂಬಂಧಿಕರ ಮನೆಗೆ ಹೋಗಿ ವಾಪಸ್ಸಾಗುವಾಗ 7 ಜನ ದುಷ್ಕರ್ಮಿಗಳು ಯುವಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು. ಬಳಿಕ ಅಲ್ಲಿ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮೀರತ್ ಮೆಡಿಕಲ್ ಪೊಲೀಸ್ ಠಾಣಾ ಪ್ರದೇಶದ ಮೊಹಲ್ಲಾ ಜಾಗೃತಿ ವಿಹಾರದಲ್ಲಿ ಘಟನೆ ನಡೆದಿದ್ದು ಹಲ್ಲೆ ಬಳಿಕ ವಿದ್ಯಾರ್ಥಿಯ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿ ದುಷ್ಕೃತ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us