Advertisment

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ಧನ ಘೋಷಿಸಿದ ಸಿಎಂ; 50 ಲಕ್ಷ ಮಂಜೂರು ಮಾಡಿದ ಸಿದ್ದರಾಮಯ್ಯ

author-image
AS Harshith
Updated On
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ಧನ ಘೋಷಿಸಿದ ಸಿಎಂ; 50 ಲಕ್ಷ ಮಂಜೂರು ಮಾಡಿದ ಸಿದ್ದರಾಮಯ್ಯ
Advertisment
  • ಉಗ್ರರೊಂದಿಗೆ ಜಮ್ಮು-ಕಾಶ್ಮೀರದ ರಜೌರಿಯಲ್ಲಿ ನಡೆದ ಯುದ್ಧ
  • ಈ ಕಾಳಗದಲ್ಲಿ ಯೋಧ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾದರು
  • ಕ್ಯಾಪ್ಟನ್ ಪ್ರಾಂಜಲ್ ಕುಟುಂಬದ ಜೊತೆ ನಿಂತ ಸಿಎಂ ಸಿದ್ದರಾಮಯ್ಯ

ಜಮ್ಮು -ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

Advertisment

ಈ ಬಗ್ಗೆ ಟ್ವೀಟ್ ಮಾಡಿರೋ ಸಿಎಂ ಸಿದ್ದರಾಮಯ್ಯ, ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ.. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು. ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯ ಅಂತ ಯೋಧನನ್ನ ನೆನೆದಿದ್ದಾರೆ.


">December 4, 2023

ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು, ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment