ಭಾರತದ ಹಿತಕ್ಕಾಗಿ ದಂಪತಿ 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಬೇಕು- CM

author-image
Bheemappa
Updated On
ದೇಶದ ಅತ್ಯಂತ ಶ್ರೀಮಂತ ಸಿಎಂ ಯಾವ ರಾಜ್ಯದವರು; ಸಿದ್ದರಾಮಯ್ಯ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ?
Advertisment
  • 2ಕ್ಕಿಂತ ಹೆಚ್ಚು ಮಕ್ಕಳನ್ನ ಹೊಂದಿದವರಿಗೆ ಎಲೆಕ್ಷನ್​ಗೆ ಅವಕಾಶ?
  • ಹೆಚ್ಚು ಮಕ್ಕಳನ್ನು ಪಡೆಯಿರಿ ಎಂದು ಮನವಿ ಮಾಡಿರುವ ಸಿಎಂ
  • ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಪ್ರೋತ್ಸಾಹಧನಕ್ಕೆ ಮಸೂದೆ?

ಹೈದರಾಬಾದ್: ದಂಪತಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಬೇಕು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಪರ್ಧಿಸಲು ಕಾನೂನು ರೂಪಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದಿದ್ದಾರೆ.

ಅಮರಾವತಿ ನಿರ್ಮಾಣ ಕಾಮಗಾರಿ ಕಾರ್ಯಕ್ರಮ ಪುನಃ ಆರಂಭಿಸಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು ಅವರು, ದಕ್ಷಿಣ ಭಾರತದಲ್ಲಿ ಅದರಲ್ಲಿ ಆಂಧ್ರಪ್ರದೇಶದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು ದಂಪತಿ 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತೆ ಸಲಹೆ ನೀಡಿದ್ದಾರೆ. ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಪ್ರೋತ್ಸಾಹಧನ ನೀಡಲು ಮಸೂದೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಪಂತ್ ಸೆಂಚುರಿ ಮಿಸ್ ಮಾಡಿಕೊಂಡಿದ್ದು ಎಷ್ಟು ಬಾರಿ.. 99ಗೆ ಔಟ್ ಆಗಿದ್ದು ಇದೇ ಮೊದಲ?

publive-image

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಮಾತ್ರ ಸ್ಪರ್ಧಿಸುವ ಕಾನೂನು ರೂಪಿಸಲಾಗುವುದು. ರಾಜ್ಯದ ಹಲವಾರು ಜಿಲ್ಲೆಗಳ ಹಳ್ಳಿ, ಗ್ರಾಮಗಳಲ್ಲಿ ಕೇವಲ ವಯಸ್ಸು ಆದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯುವಕರು ದೇಶದ ವಿವಿಧೆಡೆ ಹಾಗೂ ವಿದೇಶಗಳಿಗೆ ವಲಸೆ ಹೋಗಿದ್ದಾರೆ. ಆಂಧ್ರದಲ್ಲಿ ಜನಸಂಖ್ಯೆಯು ಶೇಕಡಾ 1.6ಕ್ಕೆ ಇಳಿದಿದೆ. ಹೀಗಾಗಿ ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ದೇಶದಲ್ಲಿ ಯುವಕರ ಸಂಖ್ಯೆ ಅಧಿಕವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ನಾವು ಯುವ ಜನಸಂಖ್ಯೆಯಲ್ಲಿ ಕೊರತೆ ಅನುಭವಿಸುತ್ತಿದ್ದೇವೆ. ಆಂಧ್ರಪ್ರದೇಶ ಮಾತ್ರವಲ್ಲ, ದೇಶದ ಹಲವು ಗ್ರಾಮಗಳಲ್ಲಿ ಈಗ ವೃದ್ಧರೇ ಉಳಿದಿದ್ದಾರೆ.
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ದೇಶದಲ್ಲಿ ಯುವಕರ ಸಂಖ್ಯೆ ಗಣನೀಯವಾಗಿ ಏರಿಕೆ ಆಗಲಿದೆ. ಅಲ್ಲದೇ ಯುವಕರು ದೇಶದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುವರು. ರಾಷ್ಟ್ರದ ಹಿತಕ್ಕಾಗಿ ಹೆಚ್ಚು ಮಕ್ಕಳನ್ನು ಬೆಳೆಸಿಕೊಳ್ಳಿ ಎಂದಿದ್ದಾರೆ. 2018ರಲ್ಲೂ ಸಿಎಂ ಚಂದ್ರಬಾಬು ನಾಯ್ಡು ಅವರು ಇದೇ ರೀತಿ ಜನರಿಗೆ ಹೇಳಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment