newsfirstkannada.com

ನಾಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

Share :

Published June 5, 2024 at 11:27pm

    ಖುದ್ದು ಸರ್ಕಾರಿ ನಿವಾಸ ಕಾವೇರಿಗೆ ಕರೆಸಿಕೊಂಡು ರಾಜೀನಾಮೆ ಬಗ್ಗೆ ಪ್ರಸ್ತಾಪ

    ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ಆರೋಪ

    2 ಗಂಟೆಗೂ ಹೆಚ್ಚು ಹೊತ್ತು ನಾಗೇಂದ್ರ ಜೊತೆ ಚರ್ಚಿಸಿರುವ ಸಿದ್ದರಾಮಯ್ಯ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂಪಾಯಿ ಹಗರಣದ ತನಿಖೆ ತೀವ್ರಗೊಂಡಿದೆ. ಮೊನ್ನೆಯಷ್ಟೇ ಎಸ್‌ಐಟಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಿ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್​ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಹೊಸ ಟ್ವಿಸ್ಟ್; ಸಚಿವ ನಾಗೇಂದ್ರ ಪಿಎ ಅರೆಸ್ಟ್​

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್​ನಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವ ನಾಗೇಂದ್ರ ಪಿಎ ನೆಕ್ಕುಂಟಿ ನಾಗರಾಜ್​ನನ್ನು ಎಸ್​ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಇವರ ಜೊತೆಗೆ ನಾಗರಾಜ್ ಸ್ನೇಹಿತ ನಾಗೇಶ್ ಎಂಬಾತನನ್ನ ಎಸ್ಐಟಿ ಬಂಧಿಸಿದ್ದಾರೆ. ಇನ್ನು, ಇದೇ ಕೇಸ್​ ಸಂಬಂಧ ಮಿನಿಸ್ಟರ್​ ನಾಗೇಂದ್ರ ಅವರಿಗೆ ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ.

ಸಿಎಂ ಸಿದ್ದರಾಮಯ್ಯನವರು ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಕರೆಸಿಕೊಂಡು ಚರ್ಚಿಸಿದ್ದರು. ಸುಮಾರು ಎರಡು ಗಂಟೆಗೂ ಅಧಿಕ ನಾಗೇಂದ್ರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿದ್ದರು. ಇದಾದ ಬಳಿಕ ರಾಜೀನಾಮೆ ಬಗ್ಗೆ ಸಿಎಂ ಚರ್ಚೆ ಸೂಚನೆ ನೀಡಿದ್ದಾರಂತೆ.

ಎಸ್ಐಟಿ ತನಿಖೆಯಲ್ಲಿ ನಾಗೇಂದ್ರ ಅವರ ಹೆಸರು ಪ್ರಸ್ತಾಪವಾಗಿರುವ ಕಾರಣಕ್ಕೆ ರಾಜೀನಾಮೆಗೆ ಸಿಎಂ ಸೂಚಿಸಿದ್ದಾರೆ. ಇದಕ್ಕೂ ಸಿಎಂ ಮೊದಲು ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಜೊತೆ ಚರ್ಚಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಂತರ ಅಂತಿಮವಾಗಿ ಸಚಿವ ನಾಗೇಂದ್ರ ರಾಜೀನಾಮೆಗೆ ನೀಡುವಂತೆ ಸಿಎಂ ಸಿದ್ದರಾಮಯ್ಯನವರು ಸೂಚನೆ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?

https://newsfirstlive.com/wp-content/uploads/2024/06/nagendra.jpg

Load More