/newsfirstlive-kannada/media/post_attachments/wp-content/uploads/2025/02/CM-Siddaramaiah-On-Budget-1.jpg)
2025-26ನೇ ಸಾಲಿನ ರಾಜ್ಯ ಬಜೆಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಸಿಎಂ ಸಿದ್ದರಾಮಯ್ಯ ಮುಂದಿನ ಮಾರ್ಚ್ 7ಕ್ಕೆ ತಮ್ಮ 16ನೇ ದಾಖಲೆಯ ಬಜೆಟ್ ಮಂಡಿಸುವುದಾಗಿ ಘೋಷಣೆ ಮಾಡಿದ್ದಾರೆ. ಬೆಲೆ ಏರಿಕೆಗೆ ಶ್ರೀಸಾಮಾನ್ಯರು ತತ್ತರಿಸಿ ಹೋಗಿದ್ದು, ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ.
ಬಜೆಟ್ ಮಂಡನೆ ಬಗ್ಗೆ ಹಲವು ಸುತ್ತಿನ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತ ಮಾಹಿತಿ ನೀಡಿದರು. ಮಾರ್ಚ್ 3ರಿಂದ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಹೊಸ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಮಾರ್ಚ್ 3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 4, 5, 6ರಂದು ಚರ್ಚೆ ನಡೆಯಲಿದೆ. ಮಾರ್ಚ್ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಸದ್ಯ ಮಂಡಿನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ವ್ಹೀಲ್ ಚೇರ್‌ನಲ್ಲೇ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿದರು. ಈ ಬಗ್ಗೆ ಮಾತನಾಡಿದ ಸಿಎಂ ಆರೋಗ್ಯ ಈಗ ಇಂಪ್ರೂವ್ ಆಗ್ತಿದೆ. ಒತ್ತಡ ಆಗಿರೋದ್ರಿಂದ ನೋವಿದೆ. ನೋವು ಈಗ ಕಡಿಮೆ ಆಗ್ತಿದೆ ಎಂದರು. ಸಭೆ ಬಳಿಕ ಬಜೆಟ್ ಬಗ್ಗೆ ಮಾತನಾಡಿದ ಅವರು ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರ್ತೀನಿ ಎಂಬ ಮಾತು ಕೊಡ್ತೀನಿ ಎಂದರು.
ಇದನ್ನೂ ಓದಿ: Microfinance: ಕೊನೆಗೂ ಬಂತು ಹೊಸ ಕಾನೂನು.. ಸರ್ಕಾರಕ್ಕೆ ರಾಜ್ಯಪಾಲರು ಕೊಟ್ಟ 6 ಸಲಹೆಗಳು ಏನೇನು?
ಇನ್ನು, ಮೆಟ್ರೋ ಟಿಕೆಟ್ ದರ ಏರಿಕೆ, ಬೆಲೆ ಏರಿಕೆ ಬಗ್ಗೆ ಮಾತನಾಡಿರುವ ಸಿಎಂ, ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆಗೆ ಏನು ಮಾಡಬೇಕೋ ಅದು ಮಾಡ್ತೀವಿ. ಕೇಂದ್ರ ಸರ್ಕಾರ ಕೂಡ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ