/newsfirstlive-kannada/media/post_attachments/wp-content/uploads/2024/08/cm-siddu-1.jpg)
ಮೈಸೂರು: ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಸಂಬಂಧಿಸಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು. ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಅದೊಂದು ಇಂಟಲಿಜೆನ್ಸ್ ಹಾಗೂ ಸೆಕ್ಯೂರಿಟಿ ಫೇಲ್ಯೂರ್ ಎಂದರು.
ಇದನ್ನೂ ಓದಿ: ಪಾಕ್ಗೆ ಅರಗಿಸಿಕೊಳ್ಳಲಾಗದ ಸಂದಿಗ್ಧತೆ – ಭಾರತ ಸರ್ಕಾರ ತೆಗೆದುಕೊಂಡ 10 ದಿಟ್ಟ ಹೆಜ್ಜೆಗಳು..!
ಕೇಂದ್ರ ಸರ್ಕಾರಕ್ಕೆ ಭದ್ರತಾ ಕ್ರಮ ತೆಗೆದುಕೊಂಡಿಲ್ಲ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಪಾಕಿಸ್ತಾನದ ಮೇಲೆ ಯುದ್ಧ ಸಾರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯುದ್ಧದ ಅಗತ್ಯತೆ ಇಲ್ಲ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಅಷ್ಟೇ. ಭದ್ರತಾ ವ್ಯಸಸ್ಥೆ ಮಾಡಬೇಕು. ಯುದ್ಧದ ಪರ ನಾವು ಇಲ್ಲ. ಶಾಂತಿ ಇರಬೇಕು. ಜನರಿಗೆ ಭದ್ರತೆ ಇರಬೇಕು. ಕೇಂದ್ರ ಸರ್ಕಾರ ಭದ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು.
ಇನ್ನು ಪಾಕಿಸ್ತಾನೀಯರನ್ನು ಕರ್ನಾಟಕದಿಂದ ಹೊರಗೆ ಕಳುಹಿಸುವ ವಿಚಾರಕ್ಕೆ ಮಾತನಾಡಿ.. ಈ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರ ಏನು ಹೇಳಿದೆ ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ಸಹಕಾರ ಕೊಡುತ್ತೇವೆ ಎಂದರು.
ಇದನ್ನೂ ಓದಿ: ಪ್ಲೀಸ್ ನೀರು ಕೊಡಿ ಭಾರತ.. ತಮ್ಮ ದೇಶವನ್ನು ತಾವೇ ಟ್ರೋಲ್ ಮಾಡಿಕೊಂಡ ಪಾಕಿಗಳು! VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ