/newsfirstlive-kannada/media/post_attachments/wp-content/uploads/2024/08/cm-siddu-1.jpg)
ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಮುಂದಿನ ಎಲ್ಲಾ ಕಾರ್ಯಕ್ರಮಗಳು ಮುಂದೂಡುವ ಸಾಧ್ಯತೆಗಳು ಇವೆ. ಗೌರಿಬಿದನೂರಿಗೆ ತೆರಳುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ನವೆಂಬರ್ನಲ್ಲಿ ಸಿಎಂ ಬದಲಾವಣೆ ಪಕ್ಕಾ? ಹೊಸ ಬಾಂಬ್ ಸಿಡಿಸಿದ ಆರ್ ಅಶೋಕ್
ವೈದ್ಯರ ಸಲಹೆಯ ಮೇರೆಗೆ ಮುಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾ ಬೇಡವಾ ಎಂಬ ನಿರ್ಧಾರಗಳಿಗೆ ಬರಲಿದ್ದಾರೆ ಎಂದು ಮೂಲಗಳು ನ್ಯೂಸ್ಫಸ್ಟ್ಗೆ ತಿಳಿಸಿವೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ