/newsfirstlive-kannada/media/post_attachments/wp-content/uploads/2025/03/SIDDARAMAIAH_BUDGET_10.jpg)
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯು ಈಗಾಗಲೇ ಯಶಸ್ವಿಯಾಗಿದೆ. ಉಚಿತ ವಿದ್ಯುತ್ ನೀಡುವ ಯೋಜನೆ ಇದಾಗಿದ್ದು ರಾಜ್ಯದ ಬಹುತೇಕ ಕುಟುಂಬಗಳು ಇದರ ಫಲ ಪಡೆದುಕೊಳ್ಳುತ್ತಿವೆ. ಸದ್ಯ 16ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗಾಗಿ ಹೆಚ್ಚುವರಿ ಅನುದಾನ ಮೀಸಲಿಟ್ಟಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಬಂದ ಮೇಲೆ 5 ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಯೋಜನೆಯು ಒಂದಾಗಿತ್ತು. 200 ಯೂನಿಟ್ ಒಳಗೆ ಯಾರು ವಿದ್ಯುತ್ ಅನ್ನು ಬಳಕೆ ಮಾಡುತ್ತಾರೋ ಅವರು ಬಿಲ್ ಪಾವತಿ ಮಾಡುವಂತಿಲ್ಲ. ಇದಕ್ಕೆ ಸರ್ಕಾರವೇ ಹಣ ಸಂದಾಯ ಮಾಡುತ್ತದೆ. ಹೀಗಾಗಿಯೇ 2025ರ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನುದಾನ ತೆಗೆದಿರಿಸಿದ್ದಾರೆ.
ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸಿದ್ದರಾಮಯ್ಯ ಗುಡ್ನ್ಯೂಸ್.. ಬಿಸಿಯೂಟ ಕಾರ್ಯಕರ್ತೆಯರಿಗೂ ಸಿಹಿಸುದ್ದಿ..!
ಸಿಎಂ ಸಿದ್ಧರಾಮಯ್ಯ ಅವರು ಜನಪ್ರಿಯ ಯೋಜನೆ ಗೃಹಜ್ಯೋತಿ ಯೋಜನೆಗೆ ಹೆಚ್ಚುವರಿಯಾಗಿ ಅನುದಾನ ಮೀಸಲಿಟ್ಟಿದ್ದಾರೆ. ಕಳೆದ ವರ್ಷದ ಮುಂಗಡಪತ್ರದಲ್ಲಿ 9,657 ಕೋಟಿ ಮೀಸಲು ಇಟ್ಟಿದ್ದರು. ಅದರಂತೆ ಈ ಬಾರಿಯೂ 10,100 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದಾರೆ. 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುವವರ ಹಣವನ್ನು ಸರ್ಕಾರವೇ ಪಾವತಿ ಮಾಡಲಿದೆ.
ಗೃಹಜ್ಯೋತಿ ಯೋಜನೆಗೆ ಈಗಲೂ ಅವಕಾಶ ಇದೆ
ಗೃಹಜ್ಯೋತಿ ಯೋಜನೆಯ ನೋಂದಣಿಗೆ ಈಗಲೂ ಅವಕಾಶವಿದೆ. ಮನೆ ಬದಲಾವಣೆ ಮಾಡಿಕೊಂಡಾಗ ನೋಂದಾಣಿ ಮಾಡಿಕೊಳ್ಳಬಹುದು. ಹೊಸ ಮನೆ ಕಟ್ಟುವವರು ಕೂಡ ನೋಂದಣಿ ಮಾಡಿಕೊಳ್ಳಬಹುದು. ನಿಗದಿತ 200 ಯೂನಿಟ್‌ಗಳ ಒಳಗೆ ವಿದ್ಯುತ್ ಬಳಕೆ ಮಾಡಿಕೊಳ್ಳಬಹುದು. ಇದರಿಂದ ಗ್ರಾಹಕರು ಬಿಲ್ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ